News Kannada
Wednesday, October 05 2022

ಕರ್ನಾಟಕ

ಬಾಯ್ಲರ್ ಸ್ಪೋಟ ಪ್ರಕರಣ: ಐದು ಲಕ್ಷ ರೂ ಪರಿಹಾರ - 1 min read

Photo Credit :

ಬಾಯ್ಲರ್ ಸ್ಪೋಟ ಪ್ರಕರಣ: ಐದು ಲಕ್ಷ ರೂ ಪರಿಹಾರ

ಬೆಳಗಾವಿ: ಬಾಗಲಕೋಟೆ ಜಿಲ್ಲೆಯ ಖಾಸಗಿ ಸಕ್ಕರೆ ಕಾರ್ಖಾನೆಯ ಸಂಸ್ಕರಣಾ ಘಟಕದಲ್ಲಿ ಭಾನುವಾರ ನಡೆದ ಸ್ಪೋಟ ಪ್ರಕರಣದಲ್ಲಿ ಮೃತರಾದ ನಾಲ್ವರ ಕುಟುಂಬಗಳಿಗೂ ಕೂಡಾ ರಾಜ್ಯ ಸರ್ಕಾರ ತಲಾ ಐದು ಲಕ್ಷ ರೂ. ಪರಿಹಾರವನ್ನು ನೀಡಲಿದೆ ಎಂದು ಗೃಹ ಖಾತೆಯನ್ನು ಹೊತ್ತ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ರಾಜ್ಯ ವಿಧಾನ ಸಭೆಯಲ್ಲಿ ಸೋಮವಾರ ಪ್ರಕಟಿಸಿದ್ದಾರೆ. 

ಶಿವಮೊಗ್ಗ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಕರಿಯಣ್ಣ ಅವರ ನಿಧನಕ್ಕೆ ಮಾತ್ರವಲ್ಲದೆ ಕಳೆದ ಎರಡು ದಿನಗಳಲ್ಲಿ ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ದುರಂತಗಳಲ್ಲಿ ಸಾವನ್ನಪ್ಪಿದ ಜನರಿಗೆ ಇಂದು ಸದನದ ಕಲಾಪ ಪ್ರಾರಂಭಕ್ಕೂ ಮುನ್ನ ಸಭಾಧ್ಯಕ್ಷ ಕೆ. ಆರ್. ರಮೇಶ್‍ಕುಮಾರ್  ಸಂತಾಪ ಸೂಚಕ ನಿರ್ಣಯವನ್ನು ಮಂಡಿಸಿದರು. 

ಚಾಮರಾಜ ನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚಗುತ್ ಮಾರಮ್ಮ ದೇವಸ್ಥಾನ ಗೋಪುರದ ಶಿಲಾನ್ಯಾಸ ಸಮಾರಂಭದಲ್ಲಿ ವಿತರಿಸಲಾದ ಪ್ರಸಾದವನ್ನು ಸೇವಿಸಿ ಇಬ್ಬರು ಮಕ್ಕಳೂ ಒಳಗೊಂಡಂತೆ ಒಟ್ಟು ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ. 

ಇನ್ನೂ 108 ಜನರು ಮೈಸೂರು ಭಾಗದ 13 ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರೂ ಬೇಗ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವುದರ ಜೊತೆಗೆ ಧೈರ್ಯ ತುಂಬುವ ಕಾರ್ಯವನ್ನು ಸರ್ಕಾರ ಮಾಡಲಿ ಎಂದು ಸಭಾಧ್ಯಕ್ಷರು ಹೇಳಿದರು.

 

See also  ಮಳೆಗೆ ಸೇತುವೆ ಮೇಲೆ ಹರಿದ ನೀರು: ಪರದಾಡಿದ ಜನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು