News Kannada
Friday, September 30 2022

ಕರ್ನಾಟಕ

ಹರತಾಳ ವೇಳೆ ಮೂವರು ಯುವಕರಿಗೆ ಚೂರಿ ಇರಿತ - 1 min read

Photo Credit :

ಹರತಾಳ ವೇಳೆ ಮೂವರು ಯುವಕರಿಗೆ ಚೂರಿ ಇರಿತ

ಕಾಸರಗೋಡು: ಶಬರಿಮಲೆಯಲ್ಲಿ ಯುವತಿಯರ ಪ್ರವೇಶಕ್ಕೆ ಸಂಬಂಧಪಟ್ಟಂತೆ ಗುರುವಾರ ಕರೆ ನೀಡಲಾಗಿದ್ದ ಹರತಾಳದ ಸಂದರ್ಭದಲ್ಲಿ ಉಂಟಾದ ಅಹಿತಕರ ಘಟನೆ ಮತ್ತೆ ಮರುಕಳಿಸಿದ್ದು, ಮಂಜೇಶ್ವರದಲ್ಲಿ ಮೂವರು ಯುವಕರ ಮೇಲೆ ಗುರುವಾರ ರಾತ್ರಿ ದಾಳಿ ನಡೆದಿದೆ.

ಈ ಹಿನ್ನೆಲೆಯಲ್ಲಿ ಮಂಜೇಶ್ವರ ತಾಲೂಕಿನಲ್ಲಿ ಸೆಕ್ಷನ್ 144ರಂತೆ ಜಿಲ್ಲಾಧಿಕಾರಿ ಡಿ. ಸಜಿತ್ ಬಾಬು ನಿಷೇಧಾಜ್ಞೆ ವಿಧಿಸಿದ್ದಾರೆ. ಮಂಜೇಶ್ವರ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಗುರುವಾರ ರಾತ್ರಿ ಮಂಜೇಶ್ವರ ಕಡಂಬಾರ್ ನಲ್ಲಿ ಇಬ್ಬರು ಮತ್ತು ಕುಂಬಳೆ ಶಿರಿಯದಲ್ಲಿ ಓರ್ವನನ್ನು ಇರಿದು ಗಾಯಗೊಳಿಸಲಾಗಿದೆ. ಕಡಂಬಾರ್ ನಲ್ಲಿ ಗುರುಪ್ರಸಾದ್ (23) ಮತ್ತು ಸ್ನೇಹಿತ ಕಿರಣ್ ಕುಮಾರ್ (40) ಮೇಲೆ ಮೂರು ಬೈಕ್ ಗಳಲ್ಲಿ ಆಗಮಿಸಿದ ತಂಡವೊಂದು ದಾಳಿ ನಡೆಸಿದೆ. ಇಬ್ಬರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಂಬಳೆ ಶಿರಿಯ ಬಳಿ ವಸಂತ ಎಂಬವರನ್ನು ಇರಿದು ಗಾಯಗೊಳಿಸಲಾಗಿದೆ. ಇವರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಚರಣ್ ಎಂಬವರ ಮೇಲೆ ಹಲ್ಲೆಗೆ ಮುಂದಾದಾಗ ತಡೆಯಲೆತ್ನಿಸಿದಾಗ ಚೂರಿಯಿಂದ ಇರಿಯಲಾಗಿದೆ. ಘಟನೆ ಮರುಕಳಿಸುತ್ತಿರುವ ಹಿನ್ನಲೆಯಲ್ಲಿ ಮಂಜೇಶ್ವರ ತಾಲೂಕಿನಲ್ಲಿ ಇಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಶಾಲೆಗಳಿಗೆ ರಜೆ ನೀಡಲಾಗಿದೆ.

ಹಿಂಸಾಚಾರದಲ್ಲಿ ತೊಡಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಗುರುವಾರ ನಡೆದ ಹರತಾಳದ ಸಂದರ್ಭದಲ್ಲಿ ಮಂಜೇಶ್ವರ ತಾಲೂಕಿನ ಹಲವೆಡೆ ವ್ಯಾಪಕ ಹಿಂಸಾಚಾರ ನಡೆದಿತ್ತು. ಬಾಯಾರು ಮುಳಿಗದ್ದೆಯಲ್ಲಿ ಕರೀಂ ಎಂಬವರ ಮೇಲೆ ತಂಡವೊಂದು ಹಲ್ಲೆ ನಡೆಸಿತ್ತು. ಕರೀಂ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಡಂಬಾರ್ ಗಾಂಧಿ ನಗರದ ಇಮ್ತಿಯಾಜ್(29) ಎಂಬವರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು. ಹರತಾಳದ ಸಂದರ್ಭದಲ್ಲಿ ಟಯರ್ ಉರಿಸಿ ರಸ್ತೆ ತಡೆ ನಡೆಸಿದ್ದನ್ನು ಪ್ರಶ್ನಿಸಿದಕ್ಕಾಗಿ ಹಲ್ಲೆ ನಡೆಸಲಾಗಿತ್ತು.

ಗುರುವಾರ ಮಂಜೇಶ್ವರ, ಉಪ್ಪಳ, ಬಂದ್ಯೋಡು ಪರಿಸರದಲ್ಲಿ ಭಾರೀ ಹಿಂಸಾಚಾರ ನಡೆದಿತ್ತು. ಹರತಾಳ ಬೆಂಬಲಿಗರು 30ಕ್ಕೂ ಅಧಿಕ ಅಂಗಡಿ ಮುಂಗಟ್ಟುಗಳನ್ನು ಧ್ವಂಸ ಮಾಡಿದ್ದು, ಕಾರು, ಆಟೋ, ಬೈಕ್ ಗಳು ಸೇರಿದಂತೆ 20ಕ್ಕೂ ಅಧಿಕ ವಾಹನಗಳನ್ನು ಜಖಂಗೊಳಿಸಿದ್ದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದರು. ಮಂಜೇಶ್ವರ ಪರಿಸರದಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಪಟ್ಟಂತೆ ಹತ್ತಕ್ಕೂ ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಹಿತಕರ ಘಟನೆ ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಪಡೆಯನ್ನು ಕರೆಸಲಾಗಿದ್ದು, ಸೂಕ್ಷ್ಮ ಪ್ರದೇಶದಲ್ಲಿ ನಿಗಾ ಇರಿಸಿದೆ. ಅಹಿತಕರ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಪ್ರತಿಭಟನೆ, ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

See also  ಕಾರವಾರ: ಕಾಳಗದಲ್ಲಿ ಚಿರತೆ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

176
Stephen K

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು