News Kannada
Friday, September 30 2022

ಕರ್ನಾಟಕ

ನೀರಾವರಿ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕ ಕಡಿತ: ಕೊಡಗಿನ ಕೃಷಿಕರಿಗೆ ಶಾಕ್ - 1 min read

Photo Credit :

ನೀರಾವರಿ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕ ಕಡಿತ: ಕೊಡಗಿನ ಕೃಷಿಕರಿಗೆ ಶಾಕ್

ಮಡಿಕೇರಿ: ಕೊಡಗಿನ ಕೃಷಿಕರ 10 ಹೆಚ್‍ಪಿ ಒಳಗಿನ ನೀರಾವರಿ ಪಂಪ್‍ಸೆಟ್‍ಗಳಿಗೆ ನೀಡಲಾಗಿದ್ದ ಉಚಿತ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಚೆಸ್ಕಾಂ ಇಲಾಖೆ ಮುಂದಾಗಿದ್ದು, ಕೃಷಿಕರು ಆತಂಕಕ್ಕೆ ಒಳಗಾಗಿದ್ದಾರೆ.

ಚೆಸ್ಕಾಂ ತೆಗೆದುಕೊಂಡಿರುವ ಈ ದಿಢೀರ್ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸುಂಟಿಕೊಪ್ಪ ಹೋಬಳಿ ಕೃಷಿಕರು, ಉಚಿತ ವಿದ್ಯುತ್ ಸೌಲಭ್ಯವನ್ನು ಯಥಾವತ್ತು ಮುಂದುವರಿಸುವಂತೆ ಆಗ್ರಹಿಸಿದ್ದಾರೆ.

ಜಿಲ್ಲಾಡಳಿತ ಹಾಗೂ ಶಾಸಕರಿಗೆ ಮನವಿ ಸಲ್ಲಿಸಿರುವ ಕೃಷಿಕರು ಸರ್ಕಾರ ಕೊಡಗು ಜಿಲ್ಲೆಯ ಬಗ್ಗೆ ಮಲತಾಯಿ ಧೋರಣೆಯನ್ನು ತೋರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲವು ದಶಕಗಳಿಂದ ರಾಜ್ಯದಾದ್ಯಂತ ಕೃಷಿಕ ಸಮೂಹ ತನ್ನ ಕೃಷಿ ಚಟುವಟಿಕೆಗಳಿಗೆ ಬಳಸುತ್ತಿದ್ದ 10 ಹೆಚ್‍ಪಿ ಒಳಗಿನ ಪಂಪ್‍ಸೆಟ್‍ಗಳಿಗೆ ಸರ್ಕಾರ ಉಚಿತವಾಗಿ ವಿದ್ಯುತ್ ಒದಗಿಸುತ್ತಿತ್ತು. ಆದರೆ, ಇದೀಗ ಏಕಾಏಕಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಇಲ್ಲದ ನಿಯಮವನ್ನು ಕೊಡಗು ಜಿಲ್ಲೆಯ ಮೇಲೆ ಹೇರುವ ಮೂಲಕ ನೀರಾವರಿ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಮುಂದಾಗಿದ್ದಾರೆ. ಪ್ರಾಕೃತಿಕ ವಿಕೋಪದಿಂದ ನಲುಗಿರುವ ಜಿಲ್ಲೆಯ ಕೃಷಿಕನ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ ಎಂದು ಕೃಷಿಕರು ತೀವ್ರ ಬೇಸರ ವ್ಯಕ್ತಪಡಿಸಿದರು.

ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯಲ್ಲಿ 300 ಕ್ಕೂ ಹೆಚ್ಚಿನ ಕೃಷಿಕರು ಉಚಿತ ವಿದ್ಯುತ್ ಸಂಪರ್ಕದ ಪಂಪ್ ಸೆಟ್‍ಗಳನ್ನು ಹೊಂದಿದ್ದಾರೆ. ಕಳೆದ ಹದಿನೈದು ದಿನಗಳಿಂದ ಚೆಸ್ಕಾಂ ಇಲಾಖಾ ಸಿಬ್ಬಂದಿಗಳು ಏಕಾಏಕಿ ಈ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಮುಂದಾಗಿದ್ದಾರೆ.

ಚೆಸ್ಕಾಂ ಇಲಾಖೆಯ ಅದಿಕಾರಿಗಳು ಮತ್ತು ಸಿಬ್ಬಂದಿಗಳ ವಿದ್ಯುತ್ ಕಡಿತಗೊಳಿಸುವ ಪ್ರಯತ್ನಕ್ಕೆ ಸುಂಟಿಕೊಪ್ಪ ಹೋಬಳಿಯ ಕೃಷಿಕರು ತಡೆ ಮಾಡುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿರುವುದಾಗಿ ಸುಂಟಿಕೊಪ್ಪ ವಿಎಸ್‍ಎಸ್‍ಎನ್ ಅಧ್ಯಕ್ಷ ಎನ್.ಸಿ. ಪೊನ್ಪಪ್ಪ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಚೆಸ್ಕಾಂ ಇಇ ಅವರಿಗೆ ಮನವಿ ಸಲ್ಲಿಸಿ, ಉಚಿತ ವಿದ್ಯುತ್ ಸೌಲಭ್ಯದಿಂದ ಕೃಷಿಕರನ್ನು ವಂಚಿಸದಂತೆ ಮನವಿ ಮಾಡಲಾಗಿದ್ದರು, ಸೂಕ್ತ ಸ್ಪಂದನ ದೊರಕಿಲ್ಲ. ಈ ಬಗ್ಗೆ ಇಂಧನ ಸಚಿವರೂ ಆಗಿರುವ ಮುಖ್ಯಮಂತ್ರಿಗಳು ಅಗತ್ಯ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.

ಕೃಷಿಕ ಸಮೂಹದ ಸಂಕಷ್ಟಗಳನ್ನು ಇಂಧನ ಸಚಿವರು ಅರಿತು, ಉಚಿತ ವಿದ್ಯುತ್ ಸೌಲಭ್ಯವನ್ನು ಕೃಷಿಕರ ಪಂಪ್‍ಸೆಟ್‍ಗಳಿಗೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಹೋರಾಟ ರೂಪಿಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

See also  ಕರ್ನಾಟಕ ಪತ್ರಕರ್ತರಂತೆ ಕಾಸರಗೋಡಿನ ಪತ್ರಕರ್ತರಿಗೂ ಸವಲತ್ತು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು