News Kannada
Friday, September 30 2022

ಕರ್ನಾಟಕ

ಕೊಡಗಿನಲ್ಲಿ ಮುಷ್ಕರದ ಬಿಸಿ ಇಲ್ಲ: ಪ್ರತಿಭಟನೆಯಷ್ಟೇ - 1 min read

Photo Credit :

ಕೊಡಗಿನಲ್ಲಿ ಮುಷ್ಕರದ ಬಿಸಿ ಇಲ್ಲ: ಪ್ರತಿಭಟನೆಯಷ್ಟೇ

ಮಡಿಕೇರಿ: ಕಾರ್ಮಿಕ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಕರೆ ನೀಡಿರುವ ಎರಡು ದಿನಗಳ ಮುಷ್ಕರಕ್ಕೆ ಕೊಡಗು ಜಿಲ್ಲೆಯಲ್ಲಿ ಬೆಂಬಲ ದೊರೆಯುವ ಸಾಧ್ಯತೆ ಕ್ಷೀಣಿಸಿದೆ. ಖಾಸಗಿ ಬಸ್‍ಗಳು ಎಂದಿನಂತೆ ಸಂಚರಿಸಲಿದ್ದು, ಶಾಲಾ ಕಾಲೇಜುಗಳು ಕೂಡ ತೆರೆದಿರುತ್ತವೆ.

ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜ.8 ಮತ್ತು 9ರಂದು 48 ಗಂಟೆಗಳ ಮುಷ್ಕರಕ್ಕೆ ಕರೆ ನೀಡಿದ್ದು, ಕೊಡಗಿನಲ್ಲೂ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಸಹಕರಿಸುವಂತೆ ಮನವಿ ಮಾಡಿವೆ. ಆದರೆ ಬಂದ್‍ನಂತಹ ಪ್ರಕ್ರಿಯೆಗಳಿಂದ ಕೊಡಗು ಹೊರಗುಳಿಯಲಿದ್ದು, ಕಾರ್ಮಿಕರ ಪ್ರತಿಭಟನೆಗಳಷ್ಟೇ ಮೂರು ತಾಲೂಕುಗಳಲ್ಲಿ ನಡೆಯಲಿದೆ.

ಶಾಲಾ ಕಾಲೇಜುಗಳಿಗೆ ರಜೆ ಇಲ್ಲವೆಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಸ್ಪಷ್ಟಪಡಿಸಿದ್ದಾರೆ. ಖಾಸಗಿ ಬಸ್‍ಗಳ ಸಂಚಾರ ಎಂದಿನಂತೆ ಇರಲಿದೆ ಎಂದು ಕೊಡಗು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ತಿಳಿಸಿದ್ದಾರೆ. ಆಟೋ ರಿಕ್ಷಾಗಳು ಎಂದಿನಂತೆ ಓಡಾಡಲಿವೆ ಎಂದು ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಡಿ.ಹೆಚ್.ಮೇದಪ್ಪ ಹೇಳಿದ್ದಾರೆ. ಜಿಲ್ಲೆಯ ವರ್ತಕರು ಕೂಡ ಮುಷ್ಕರದ ಬಗ್ಗೆ ನಿರಾಸಕ್ತಿ ತೋರಿದ್ದಾರೆ.

ಸಹಕರಿಸಲು ಮನವಿ
ದೇಶದ ಹತ್ತು ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜ.8 ಮತ್ತು 9ರಂದು ಕರೆ ನೀಡಿರುವ ರಾಷ್ಟ್ರ ವ್ಯಾಪ್ತಿ ಮುಷ್ಕರದ ಕರೆಯಂತೆ ಕೊಡಗು ಜಿಲ್ಲೆಯಲ್ಲಿರುವ ವಿವಿಧ ಕಾರ್ಮಿಕ ಸಂಘಟನೆಗಳು ಕೂಡ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ ಎಂದು ಜಂಟಿ ಕ್ರಿಯಾ ಸಮಿತಿಯ ಪ್ರಮುಖರು ಹಾಗೂ ಅಂಗನವಾಡಿ ಸಂಘಟನೆಯ ಮುಖಂಡರಾದ ಟಿ.ಪಿ.ರಮೇಶ್ ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಹೊಸ ಹಾಗೂ ಸಭ್ಯ ಉದ್ಯೋಗಗಳನ್ನು ನಿರುದ್ಯೋಗಿಗಳಿಗೆ ನೀಡಬೇಕು, 7ನೇ ವೇತನ ಆಯೋಗ ಜಾರಿಗೊಳಿಸಿರುವ ಕನಿಷ್ಠ ವೇತನ ರೂ.18 ಸಾವಿರ ನೀಡಬೇಕು, ಕಾರ್ಮಿಕ ಕಾನೂನುಗಳನ್ನು ಮೊಟಕುಗೊಳಿಸುವ ಕ್ರಮವನ್ನು ಕೈಬಿಡಬೇಕು, ಗುತ್ತಿಗೆ ಆಧಾರದ ನೌಕರರನ್ನು ಖಾಯಂಗೊಳಿಸಬೇಕು, ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸಬಾರದು, ಕಾರ್ಮಿಕರಿಗೆ ಸಾಮಾಜಿಕ ರಕ್ಷಣೆ ಮತ್ತು ಭದ್ರತೆ ನೀಡಬೇಕು, ಕೃಷಿ ಬಿಕ್ಕಟ್ಟು ಮತ್ತು ರೈತರ ಆತ್ಮಹತ್ಯೆಗೆ ಪರಿಹಾರ ಸೂಚಿಸಲು ಡಾ.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು ಸೇರಿದಂತೆ ಕಾರ್ಮಿಕರು ಹಾಗೂ ಜನಸಾಮಾನ್ಯರ ಪರವಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎರಡು ದಿನಗಳ ಮುಷ್ಕರವನ್ನು ನಡೆಸಲಾಗುತ್ತಿದೆ ಎಂದು ರಮೇಶ್ ಮಾಹಿತಿ ನೀಡಿದ್ದಾರೆ.

ಇಂದು ಮತ್ತು ನಾಳೆ ಪ್ರತಿಭಟನೆ
ಜ.8ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಮೈದಾನದ ಬಳಿ ಪ್ರತಿಭಟನೆಯನ್ನು ನಡೆಸಲಾಗುವುದು. ವಿರಾಜಪೇಟೆಯಲ್ಲಿ ಮಾರಿಯಮ್ಮ ದೇವಾಲಯದ ಬಳಿ ಮತ್ತು ಸೋಮವಾರಪೇಟೆಯಲ್ಲೂ ಜಂಟಿಕ್ರಿಯಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಲಿದೆ.

ಜ.9 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿಯ ಚೌಕಿ ವೃತ್ತ (ಇಂದಿರಾ ಗಾಂಧಿ ವೃತ್ತ) ದಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ.

 

See also  ‘ಮಾಹಿತಿ ತಂತ್ರಜ್ಞಾನದಿಂದ ಹಲವು ಅವಕಾಶ’
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು