News Kannada
Tuesday, October 04 2022

ಕರ್ನಾಟಕ

ಜ.10 ಮಳೆಹಾನಿ ಪ್ರದೇಶಗಳಿಗೆ ಡಾ. ವೀರೇಂದ್ರ ಹೆಗ್ಗಡೆ ಭೇಟಿ - 1 min read

Photo Credit :

ಜ.10 ಮಳೆಹಾನಿ ಪ್ರದೇಶಗಳಿಗೆ ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಮಡಿಕೇರಿ: ಕಳೆದ ಆಗಸ್ಟ್ ತಿಂಗಳಿನಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಅಪಾರ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ಪುನರ್ ನಿರ್ಮಾಣಕ್ಕಾಗಿ ಕೈಜೋಡಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು, ಸುಮಾರು 2106 ಕುಟುಂಬಗಳಿಗೆ 8 ಕೋಟಿ ರೂ.ಗಳನ್ನು ವಿತರಿಸಲು ಜ.10 ರಂದು ಮಡಿಕೇರಿಗೆ ಆಗಮಿಸುತ್ತಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಕರಾವಳಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕರಾದ ಕೆ. ಮಹಾವೀರ ಅಜ್ರಿ, ಶ್ರೀ ಕ್ಷೇತ್ರ ಧರ್ಮಸ್ಥಳವು ಘೋಷಿಸಿರುವ 10 ಕೋಟಿ ನೆರವಿನಲ್ಲಿ 2 ಕೋಟಿ ರೂ.ಗಳನ್ನು ಈಗಾಗಲೇ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗಿದೆ. ಉಳಿದ 8 ಕೋಟಿ ರೂ.ಗಳನ್ನು 2106 ಕುಟುಂಬಗಳಿಗೆ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರೇ ವಿತರಿಸಲಿದ್ದಾರೆ ಎಂದರು.

ಅತಿವೃಷ್ಟಿಯಿಂದ ಮನೆ ಮತ್ತು ಕೃಷಿ, ಕೃಷಿ ಜಮೀನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ವಿತರಣೆಯಾಗಲಿದೆ. ನಿತ್ಯೋಪಯೋಗಿ ವಸ್ತುಗಳನ್ನು ಖರೀದಿಸಲು 15 ಸಾವಿರ ರೂ., ಮನೆ ದುರಸ್ತಿಗಾಗಿ 25 ಸಾವಿರ ರೂ., ಕೃಷಿ ಕ್ಷೇತ್ರದ ಪುನರ್ ನಿರ್ಮಾಣಕ್ಕಾಗಿ 25 ಸಾವಿರ ರೂ.ಗಳಂತೆ ಜ.10 ರಂದು ನಡೆಯುವ ಕಾರ್ಯಕ್ರಮದಲ್ಲಿ ಪರಿಹಾರ ಧನವನ್ನು ನೀಡಲಾಗುವುದೆಂದು ತಿಳಿಸಿದರು.

ಡಾ. ವೀರೇಂದ್ರ ಹೆಗ್ಗಡೆಯವರು ಗುರುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆಯುವ ಸಮಾಲೋಚನಾ ಸಭೆಯಲ್ಲಿ ಪರಿಹಾರ ಧನ ವಿತರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್, ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ, ಪಿರಿಯಾಪಟ್ಟಣ ಶಾಸಕ ಕೆ. ಮಹಾದೇವ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕರಾದ ಡಾ.ಎಲ್.ಹೆಚ್. ಮಂಜುನಾಥ್, ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ. ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್, ಮಡಿಕೇರಿ ತಾ.ಪಂ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಕುಮಾರ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮೀಪ್ರಿಯ, ಐಡಿಬಿಐ ಬ್ಯಾಂಕ್‍ನ ಸಹಾಯಕ ಪ್ರಧಾನ ವ್ಯವಸ್ಥಾಪಕ ಎಸ್. ರಾಮಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ಮಹಾವೀರ ಅಜ್ರಿ ಮಾಹಿತಿ ನೀಡಿದರು.

ಆರ್ಥಿಕ ವಿರಾಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಾಲ ಪಡೆದ, ಅತಿವೃಷ್ಟಿಯಿಂದ ಹಾನಿಗೆ ಒಳಗಾದ ಸದಸ್ಯರುಗಳಿಗೆ ಸಾಲ ಮರುಪಾವತಿಸಲು 3 ತಿಂಗಳ ಆರ್ಥಿಕ ವಿರಾಮವನ್ನು ನೀಡಲಾಗಿತ್ತು. ಇದೀಗ ಸಂತ್ರಸ್ತರ ಆರ್ಥಿಕ ಸ್ಥಿತಿಗತಿಯನ್ನು ನೋಡಿಕೊಂಡು ಸಾಲ ಸಂಗ್ರಹಿಸಲಾಗುತ್ತಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಎ. ಯೋಗೀಶ್ ತಿಳಿಸಿದರು.

ಕೊಡಗು ಜಿಲ್ಲೆಯ ಮೂರು ತಾಲೂಕುಗಳು ಮತ್ತು ಪಿರಿಯಾಪಟ್ಟಣ ಹಾಗೂ ಅರಕಲಗೂಡು ತಾಲೂಕುಗಳು ಸೇರಿ ಈ ಘಟಕದಲ್ಲಿ 10,500 ಸಂಘಗಳಿದ್ದು, 1 ಲಕ್ಷಕ್ಕೂ ಅಧಿಕ ಸದಸ್ಯರುಗಳಿದ್ದಾರೆ. ಅತಿವೃಷ್ಟಿ ಹಾನಿ ಸಂತ್ರಸ್ತರಿಗೆ ಸಾಲ ಮರುಪಾವತಿ ಕಷ್ಟವಾಗುವುದರಿಂದ 6 ತಿಂಗಳ ಕಾಲಾವಕಾಶವನ್ನು ನೀಡಲಾಗುತ್ತಿದೆ ಎಂದರು. ಯೋಜನೆಯ ಮೂಲಕ 5 ತಾಲ್ಲ್ಲೂಕುಗಳಲ್ಲಿ ಒಟ್ಟು 267 ಕೋಟಿ ರೂ. ಸಾಲ ಸಂಗ್ರಹವಾಗಬೇಕಾಗಿದೆ ಎಂದರು.

See also  ವಿಶ್ವದಾಖಲೆ ನಿರ್ಮಿಸಿದ ಕೈಗಾ ಅಣುಸ್ಥಾವರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು