ಕಾರವಾರ: ಪ್ರವಾಸಕ್ಕಾಗಿ ಬಂದ ಸಂದರ್ಭದಲ್ಲಿ ಈಜಲು ಇಳಿದ ಯುವಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾದ ಕಾನೇರಿ ನದಿಯಲ್ಲಿ ಸಂಭವಿಸಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಬಾಪುಗೌಡ(19) ಮೃತಪಟ್ಟ ವ್ಯಕ್ತಿ. ಜೊಯಿಡಾ ತಾಲೂಕಿನ ಉಳವಿ ಕ್ಷೇತ್ರದಕ್ಕೆ ಗದಗ ಜಿಲ್ಲೆಯಿಂದ ಸುಮಾರು 15 ಜನರು ಪ್ರವಾಸಕ್ಕಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕಾನೇರಿ ನದಿಯಲ್ಲಿ ಈಜಲು ತೆರಳಿದ್ದಾಗ ಬಾಪುಗೌಡ ಮುಳುಗಿ ಮೃತಪಟ್ಟಿದ್ದಾರೆ.
ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಜೊಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.