ಬೆಂಗಳೂರು: ಬಿಸಿಯೂಟ ಮತ್ತು ಇಂದಿರಾ ಕ್ಯಾಂಟೀನ್ ಗಳಲ್ಲಿ ಸಿರಿಧಾನ್ಯಗಳಿಂದ ತಯಾರಿಸಿದ ಆಹಾರವನ್ನು ಪೂರೈಸುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಶಾಲಾ ಮಕ್ಕಳ ಬಿಸಿಯೂಟದಲ್ಲಿ ಪೌಷ್ಟಿಕತೆಯಿಂದ ಕೂಡಿದ ಸಿರಿಧಾನ್ಯಗಳನ್ನು ಸೇರಿಸಬೇಕೆಂಬ ಮಾತು ಕೇಳಿಬರುತ್ತಿದೆ.
ಈ ಹಿನ್ನೆಲೆ ಕಡಿಮೆ ವೆಚ್ಚದಲ್ಲಿ ಸಿರಿಧಾನ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದು ಎಲ್ಲರಿಗೂ ಸಿಗುವಂತೆ ಮಾಡಬೇಕು. ಇದು ಆರೋಗ್ಯಕ್ಕೆ ತುಂಬಾ ಉತ್ತಮ.