ಕಾಸರಗೋಡು: ಎರಡು ಲಾರಿಗಳ ನಡುವೆ ಸಿಲುಕಿದ ಬೈಕ್ ಸವಾರನೋರ್ವ ಮೃತಪಟ್ಟ ದಾರುಣ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ತೆಕ್ಕಿಲ್ ನಲ್ಲಿ ನಡೆದಿದೆ.
ಮೃತಪಟ್ಟವನನ್ನು ಮುಡಿಪು ನಿವಾಸಿ ಉಮ್ಮರುಲ್ ಫಾರೂಕ್(40) ಎಂದು ಗುರುತಿಸಲಾಗಿದೆ.
ಲಾರಿಯೊಂದರ ಮುಂದೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದಾಗ ಇನ್ನೊಂದು ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಲಾರಿಗಳೆಡೆಗೆ ಸಿಲುಕಿದ ಫಾರೂಕ್ ಸ್ಥಳದಲ್ಲೇ ಮೃತಪಟ್ಟರು. ವಿದ್ಯಾನಗರ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ಎರಡು ಲಾರಿಗಳನ್ನು ಕಸ್ಟಡಿಗೆ ತೆಗೆದುಕೊಂಡರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಫಾರೂಕ್ ಗಾರೆ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.