ಕಾರವಾರ: ಬೈಕ್ ಗೆ ಸ್ಕಾರ್ಪಿಯೋ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಆತನ ಪತ್ನಿ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಿಂಗನಳ್ಳಿ ಬಳಿ ಸಂಭವಿಸಿದೆ.
ಜಗಲಪೇಟೆ ನಿವಾಸಿ ಮುನಾಫ(24) ಸಾವನ್ನಪ್ಪಿದ್ದು, ಆತನ ಪತ್ನಿ ರಮೀಜಾ(19) ಗಂಭೀರ ಗಾಯಗೊಂಡವರು.
ಶಿರಸಿ ಕಡೆ ಹೊರಟಿದ್ದ ತಮಿಳುನಾಡು ನೋಂದಣಿ ಹೊಂದಿದ್ದ ಸ್ಕಾರ್ಪಿಯೋ ಕಾರು ಅತೀ ವೇಗದಲ್ಲಿ ಬಂದು ಬೈಕ್ ಗೆ ಡಿಕ್ಕಿಯಾಗಿದೆ. ಗಾಯಗೊಂಡವರನ್ನು ಮುಂಡಗೋಡಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.