ಕೂಡ್ಲಿಗಿ: ಭಾನುವಾರ ತಡರಾತ್ರಿ ತಾಲ್ಲೂಕಿನ ಮೊರಬ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಖಾಸಗಿ ಹಾಗೂ ಸರ್ಕಾರಿ ಬಸ್ ಮಧ್ಯೆ ಡಿಕ್ಕಿಯಾದ ಪರಿಣಾಮ ಚಾಕಲ ಮೃತಪಟ್ಟು 23ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಮೃತ ಚಾಲಕನನ್ನು ಮಲ್ಲಿಕಾರ್ಜುನ ಡಿ.ಪಾಟೀಲ್ (50) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ ನ ಚಾಲಕ ಅತಿವೇಗ ಹಾಗೂ ಅಜಾರೂಕತೆಯಿಂದ ಚಾಲನೆ ಮಾಡಿದ್ದರಿಂದ ಎದುರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ.
ಇದರಿಂದ ಕೆಎಸ್ ಆರ್ ಟಿಸಿ ಬಸ್ ಚಾಲಕ ಮಲ್ಲಿಕಾರ್ಜುನ ಡಿ.ಪಾಟೀಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು ಕೂಡ್ಲಿಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.