News Kannada
Tuesday, November 29 2022

ಕರ್ನಾಟಕ

ಅರಣ್ಯ ಅತಿಕ್ರಮಣ ಸಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ - 1 min read

Photo Credit :

ಅರಣ್ಯ ಅತಿಕ್ರಮಣ ಸಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕಾರವಾರ: ಅರಣ್ಯ ಹಕ್ಕು ಕಾಯ್ದೆಯಡಿ ತಿರಸ್ಕೃತಗೊಂಡ ಅತಿಕ್ರಮಣದಾರರ ಅರ್ಜಿಗಳನ್ನು ಮತ್ತೆ ಪರಿಶೀಲನೆ ನಡೆಸಬೇಕು ಎಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲೆಯ ಅತಿಕ್ರಮಣದಾರರು ಬುಧವಾರ ಕಾರವಾರದಲ್ಲಿ ಬೃಹತ್ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿ ಸರಕಾರದ ಗಮನ ಸೆಳೆದರು.

ನಗರದ ಮಾಲಾದೇವಿ ಮೈದಾನದಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ ಅತಿಕ್ರಮಣದಾರರು ಸಭೆ ನಡೆಸಿ ತಮ್ಮ ಹಕ್ಕು ನೀಡುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅರಣ್ಯ ಅತಿಕ್ರಮಣದಾರ ಹೋರಾಟಗಾರರ ವೇದಿಕೆ ಅಧ್ಯಕ್ಷ ಎ.ರವೀಂದ್ರನಾಥ ನಾಯ್ಕ ಮಾತನಾಡಿದರು.

ಅರಣ್ಯಭೂಮಿಯಲ್ಲಿ ವಾಸ್ತವ್ಯ ಹಾಗೂ ಸಾಗುವಳಿಗೆ ಅವಲಂಬಿತವಾಗುವ ಕುಟುಂಬಗಳಿಗೆ ಹಕ್ಕನ್ನು ನೀಡಬೇಕು. ಅರಣ್ಯ ಹಕ್ಕು ಕಾಯಿದೆಯಲ್ಲಿ ಶೇ.75ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು ಅವುಗಳನ್ನು ಪುನರ್‌ಪರಿಶೀಲಿಸಿ ಅರಣ್ಯವಾಸಿಗಳಿಗೆ ಹಕ್ಕನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ನಗರ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಅರಣ್ಯ ಅತಿಕ್ರಮಣದಾರರ ಅರ್ಜಿಯನ್ನು ಶೀಘ್ರವಾಗಿ ಮಂಜೂರಿಗೆ ಒಳಪಡಿಸಬೇಕು. ಇನ್ನು ಅರಣ್ಯ ಹಕ್ಕು ಕಾಯ್ದೆ ಅರ್ಜಿ ಮತ್ತು ಮೇಲ್ಮನವಿ ಮಂಜೂರಿ ಪ್ರಕ್ರಿಯೆಯಲ್ಲಿರುವ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ಕಾಯಿದೆ ಅಡಿಯಲ್ಲಿ ಒಕ್ಕಲೆಬ್ಬಿಸುವ ಪ್ರಕ್ರಿಯೆಯನ್ನು ತಕ್ಷಣದಿಂದ ಸ್ಥಗಿತಗೊಳಿಸಲು ಅರಣ್ಯಾಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.

ಬಳಿಕ ಪ್ರತಿಭಟನಾಕಾರರು ಮೆರವಣಿಗೆಯ ಮೂಲಕ ನಗರದ ಮುಖ್ಯ ರಸ್ತೆಗಳ ಮೂಲಕ ಸಂಚರಿಸಿ, ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು.

See also  ಕಾಸು ಕೊಡಿ ಚೆಂಡು ಹೂ ಜೊತೆ ಸೆಲ್ಫಿ ತಗೊಳ್ಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು