News Kannada
Monday, December 05 2022

ಕರ್ನಾಟಕ

ಬಿಎಸ್ ಯಡಿಯೂರಪ್ಪ ವಿರುದ್ಧ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು

Photo Credit :

ಬಿಎಸ್ ಯಡಿಯೂರಪ್ಪ ವಿರುದ್ಧ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು

ಶಿವಮೊಗ್ಗ: ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡ್ಡಿಯೂರಪ್ಪನವರ ವಿರುದ್ದ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಯುವ ಕಾಂಗ್ರೆಸ್ ಸಮಿತಿ ದೂರು ನೀಡಿದೆ.

ದೇವ ದುರ್ಗ ಶಾಸಕ ಶಿವನಗೌಡ ನಾಯಕನಿಗೆ ಆವಿಷವೊಡ್ಡಿ ಸರ್ಕಾರವನ್ನ ಅಸ್ಥಿರಗೊಳಿಸಲು ಯತ್ನಿಸಿರುವ ಆಡಿಯೋ ಬಿಡುಗಡೆಯಾಗಿದ್ದು, ಇದರ ವಿರುದ್ದ ಶಿವಮೊಗ್ಗ ನಗರ ವಿಧಾನ ಸಭಾ ಯುವ ಕಾಂಗ್ರೆಸ್ ಸಮಿತಿ ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಪ್ರತಿ ಶಾಸಕರಿಗೆ 10 ಕೋಟಿ ಹಣವನ್ನು ಕೊಡುತ್ತೇನೆಂಬ ಆಮಿಷ, ಆಶ್ವಾಸನೆಯಿಂದ ಆಡಳಿದ ಪಕ್ಷದ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿರುವುದು ಅಕ್ಷಮ್ಯ ಅಪರಾಧ. ಇವರಿಬ್ಬರ ಸಂವಾದದಲ್ಲಿ ರಾಜ್ಯದ ಗೌರವಾನ್ವಿತ ಶಾಸನ ಸಭೆಯ ಸಭಾದ್ಯಕ್ಷರ ಹೆಸರು ಮತ್ತು ದೇಶದ ಪ್ರಧಾನಿ ಹಾಗೂ ಬಿಜೆಪಿಯ ರಾಷ್ಟ್ರಧ್ಯಕ್ಷರಾದ ಅಮೀತ್ ಷಾ ಅವರ ಹೆಸರುಗಳು ಪ್ರಸ್ತಾಪಿಸಿ, ರಾಜ್ಯದ ನಾಗರಿಕರಲ್ಲಿ ಗೊಂದಲವನ್ನುಂಟು ಮಾಡಲಾಗಿದೆ.

ಕಾರಣ ಪ್ರಜಾತಂತ್ರ ವ್ಯವಸ್ಥೆಯನ್ನು ಉಳಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯು ಭಾರತೀಯ ಜನತಾ ಪಕ್ಷದ ಈ ಅಪಾಯಕಾರಿ ಕಾರ್ಯಸೂಚಿಯ ಬಗ್ಗೆ ಗಂಭೀರವಾಗಿ ಚರ್ಚಿಸಿದ ನಂತರ ಬಿ ಎಸ್ ಯಡಿಯೂರುಪ್ಪ ಮತ್ತು ಭಾರತೀಯ ಜನತಾ ಪಕ್ಷದ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಮಿತಿ ದೂರಿನಲ್ಲಿ ಒತ್ತಾಯಿಸಿದೆ.

ದೂರು ನೀಡುವ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕೆಪಿಸಿಸಿ ಕಾರ್ಯದರ್ಶಿಗಳಾದ ಹೆಚ್.ಸಿ. ಯೋಗೀಶ್, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕೆ ರಂಗನಾಥ್, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ಆರ್. ಕಿರಣ್ ಟಿ.ವಿ ರಂಜಿತ್, ಶಿವಮೊಗ್ಗ ವಿಧಾನಸಭಾ ಅಧ್ಯಕ್ಷರಾದ ಎಚ್ ಪಿ ಗಿರೀಶ್, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಡಿ ಆರ್ ಗಿರೀಶ್ ಹಾಗೂ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಧರ್ ಮುರಳಿ ರಾಹುಲ್ ಚಿನ್ನು, ಶರತ್ ಪುನೀತ್ ನದೀಮ್ ಹಾಗೂ ಇನ್ನೂ ಅನೇಕ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

 

See also  ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ: ಏ.3 ಕ್ಕೆ ಕಾಯ್ದಿರಿಸಿದ ಆದೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು