News Kannada
Saturday, December 03 2022

ಕರ್ನಾಟಕ

ವಿದ್ಯಾರ್ಥಿನಿ ಸಾವಿನ ಪ್ರಕರಣ: ಫೆ.25ರಂದು ಪಾಲಿಬೆಟ್ಟದಲ್ಲಿ ಬೃಹತ್ ಪ್ರತಿಭಟನೆ

Photo Credit :

ವಿದ್ಯಾರ್ಥಿನಿ ಸಾವಿನ ಪ್ರಕರಣ: ಫೆ.25ರಂದು ಪಾಲಿಬೆಟ್ಟದಲ್ಲಿ ಬೃಹತ್ ಪ್ರತಿಭಟನೆ

ಮಡಿಕೇರಿ: ಪಶ್ಚಿಮ ಬಂಗಾಳ ಮೂಲದ ವಲಸೆ ಕಾರ್ಮಿಕರಿಂದ ಅತ್ಯಾಚಾರ ಮತ್ತು ಹತ್ಯೆಗೊಳಗಾದ ವಿದ್ಯಾರ್ಥಿನಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಫೆ.25ರಂದು ಪಾಲಿಬೆಟ್ಟದ ಟಾಟಾ ಕಾಫಿ ಸಂಸ್ಥೆಯ ಎದುರು ಬೃಹತ್ ಪ್ರತಿಭಟನೆ ಹಾಗೂ ಜನಾಂದೋಲನ ಸಭೆ ನಡೆಸಲಾಗುವುದು ಎಂದು ಸಾರ್ವಜನಿಕ ಹೋರಾಟ ಸಮಿತಿ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮಿತಿಯ ಸಂಚಾಲಕ ಪ್ರವೀಣ್ ಸಿದ್ದಾಪುರ ಅವರು, ಕಾಫಿ ಸಂಸ್ಥೆಗೆ ಸೇರಿದ ಸಿದ್ದಾಪುರದ ಎಮ್ಮೆಗುಂಡಿ ತೋಟದಲ್ಲಿ ಹೊರ ರಾಜ್ಯದ ವಲಸೆ ಕಾರ್ಮಿಕರಿಂದ ಅತ್ಯಾಚಾರಕ್ಕೊಳಗಾಗಿ ಬರ್ಬರವಾಗಿ ಹತ್ಯೆಗೀಡಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವಿಗೀಡಾಗಿ ಎರಡು ವಾರಗಳೇ ಕಳೆದಿದ್ದರೂ, ಕಾಫಿ ಸಂಸ್ಥೆ ವತಿಯಿಂದ ಯಾವುದೇ ಸ್ಪಂದನೆ ದೊರಕಿಲ್ಲ. ಜಿಲ್ಲೆಯ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖಂಡರು ಆಕೆಯ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ್ದರೂ, ಕಾಫಿ ಸಂಸ್ಥೆಯ ವ್ಯವಸ್ಥಾಪಕರಾಗಲಿ, ಇತರ ಅಧಿಕಾರಿಗಳಾಗಲಿ ಸೌಜನ್ಯಕ್ಕೂ ಭೇಟಿ ನೀಡಿಲ್ಲ. ಅಲ್ಲದೆ ಪರಿಹಾರವನ್ನೂ ಘೋಷಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಫೆ.25ರಂದು ಬೆಳಗ್ಗೆ 11 ಗಂಟೆಗೆ ವಿವಿಧ ಸಂಘಸಂಸ್ಥೆಗಳು, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಾಲಿಬೆಟ್ಟ ಗಣಪತಿ ದೇವಾಲಯದ ಮುಂಭಾಗದಿಂದ ಟಾಟಾ ಕಾಫಿ ಸಂಸ್ಥೆ ವರೆಗೆ ‘ಟಾಟಾ ಕಾಫಿ ಚಲೋ’ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದು, ಬಳಿಕ ಸಂಸ್ಥೆಯ ಮುಂಭಾಗ ಜನಾಂದೋಲನ ಸಭೆ ನಡೆಸಲಾಗುವುದು ಎಂದರು.

ಮಾನವೀಯ ನೆಲೆಯಲ್ಲಿ ಕಾಫಿ ಸಂಸ್ಥೆ 10 ಲಕ್ಷ ರೂ.ಪರಿಹಾರ ನೀಡಬೇಕು. ಅಲ್ಲದೆ ಸಂಸ್ಥೆಯಲ್ಲಿ ದುಡಿಯುತ್ತಿರುವ ಹೆಣ್ಣು ಮಕ್ಕಳು ಇರುವ ಕುಟುಂಬಗಳಿಗೆ ಸಂಸ್ಥೆಯೇ ರಸ್ತೆ ಬದಿಯಲ್ಲಿ ನಿವೇಶನಗಳನ್ನು ನೀಡಬೇಕು ಎಂದು ಒತ್ತಾಯಿಸಿದ ಅವರು, ಅಕ್ರಮ ವಲಸಿಗರನ್ನು ತಕ್ಷಣ ಹೊರ ಹಾಕಿ ಸ್ಥಳೀಯರನ್ನು ಕೆಲಸಕ್ಕೆ ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಕೊಡಗಿನಾದ್ಯಂತ ಇರುವ ಕಂಪೆನಿ ತೋಟಗಳಲ್ಲಿ ಬಹುತೇಕ ಯಾವುದೇ ದಾಖಲೆಗಳಿಲ್ಲದ ಅಕ್ರಮ ವಲಸಿಗರು, ಬಾಂಗ್ಲಾದಂತಹ ಹೊರ ದೇಶದ ಕಾರ್ಮಿಕರು, ರೋಹಿಂಗ್ಯಾಗಳು ನೆಲೆಸಿದ್ದು, ಅಂತಹವರನ್ನು ಪತ್ತೆ ಮಾಡಿ ಕೊಡಗಿನಿಂದ ಗಡಿಪಾರು ಮಾಡಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರು ಇದುವರೆಗೂ ಸ್ಥಳಕ್ಕೆ ಭೇಟಿ ನೀಡಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳದಿರುವುದು ವಿಷಾದನೀಯ ಎಂದ ಪ್ರವೀಣ್, ರಾಜಕೀಯ ಪ್ರೇರಿತ ಕೊಲೆಗಳಾದರೆ ತಕ್ಷಣ ಸ್ಥಳಕ್ಕೆ ಧಾವಿಸುವ ಮಂತ್ರಿಗಳು ತನ್ನದಲ್ಲದ ತಪ್ಪಿಗೆ ಬರ್ಬರವಾಗಿ ಹತ್ಯೆಗೀಡಾದ ದಲಿತ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡದಿರುವುದು ಕೊಡಗಿನ ಜನತೆಗೆ ಮಾಡಿರುವ ಅಪಮಾನವಾಗಿದೆ ಎಂದು ಆರೋಪಿಸಿದರು.

ರಾಜ್ಯ ಸರಕಾರ ವಿದ್ಯಾರ್ಥಿನಿಯ ಪೋಷಕರಿಗೆ 25 ಲಕ್ಷ ರೂ.ಗಳ ಪರಿಹಾರ ನೀಡಬೇಕು, ಕುಟುಂಬದ ಒಬ್ಬ ಸದಸ್ಯರಿಗೆ ಸರಕಾರಿ ಉದ್ಯೋಗ ನೀಡುವ ಮೂಲಕ ಸರಕಾರ ಆ ಬಡ ಕುಟುಂಬಕ್ಕೆ ನೆರವಾಗಬೇಕು ಮತ್ತು ಮಾನವೀಯತೆ ಮೆರೆಯಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಮುಖಂಡ ಹರೀಶ್ ಉಪಸ್ಥಿತರಿದ್ದರು.

See also  ಮಕ್ಕಳ ಸಹಾಯವಾಣಿಯಿಂದ ಬಾಲ್ಯ ವಿವಾಹಕ್ಕೆ ತಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು