News Kannada
Thursday, December 08 2022

ಕರ್ನಾಟಕ

ಕೈ ಕಾರ್ಯಕರ್ತರ ದಾಳಿಗೆ ಜೆಡಿಎಸ್ ಕಾರ್ಯಕರ್ತರಿಗೆ ಗಂಭೀರ ಗಾಯ

Photo Credit :

ಕೈ ಕಾರ್ಯಕರ್ತರ ದಾಳಿಗೆ ಜೆಡಿಎಸ್ ಕಾರ್ಯಕರ್ತರಿಗೆ ಗಂಭೀರ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತರ ದಾಳಿಗೆ ಇಬ್ಬರು ಜೆಡಿಎಸ್ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಜೆಡಿಎಸ್ ಕಾರ್ಯಕರ್ತರಾದ ರುದ್ರೇಶ ಹಾಗೂ ಗೋಪಿ ಎಂಬುವರು ಬೈಕಿನಲ್ಲಿ ಬರುವಾಗ

ಇವರನ್ನು ಅಡ್ಡಗಟ್ಟಿದ ಕಾಂಗ್ರೆಸ್ ಕಾರ್ಯಕರ್ತರಾದ ಶರತ್, ವಿಶ್ವ, ವಿನಯ, ಸುನೀಲ ,ಮಲ್ಲಿಕಾ, ತೇಜ, ರಾಜೇಶ ಇನ್ನಿತರರು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ.

ಚಾಕು ಹಾಗೂ ಮಚ್ಚಿನಿಂದ ಮನಸೋ ಇಚ್ಛೆ ಹೊಡೆದು ಪರಾರಿ ಆಗಿದ್ದು ತೀವ್ರವಾಗಿ ಗಾಯಗೊಂಡಿರುವ ರುದ್ರೇಶ್ ಹಾಗೂ ಗೋಪಿ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೈಯಕ್ತಿಕ ಹಾಗೂ ರಾಜಕೀಯ ದ್ವೇಷವೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಗಾಯಗೊಂಡ ಇಬ್ಬರೂ ಜೆಡಿಎಸ್ ನಾಯಕ, ಮಾಜಿ ಶಾಸಕ ಅಪ್ಪಾಜಿ ಗೌಡರ ಬೆಂಬಲಿಗರು. ಹಲ್ಲೆ ಮಾಡಿದ ಆರೋಪಿಗಳು ಹಾಲಿ ಶಾಸಕ ಕಾಂಗ್ರೆಸ್ ನ ಬಿ.ಕೆ.ಸಂಗಮೇಶ್ ಬೆಂಬಲಿಗರು ಎನ್ನಲಾಗಿದೆ.

ಭದ್ರಾವತಿ ಹಳೇ ನಗರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.

 

See also  ಎರಡು ತಿಂಗಳ ರಜೆಯಲ್ಲಿ ತೆರಳಿದ ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು