ಮಂಡ್ಯ: ಮದ್ದೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿದ ಪರಿಣಾಮ 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಈ ಘಟನೆ ಐಶ್ವರ್ಯ ಶಾಲೆ ಬಳಿ ನಡೆದಿದೆ. ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.