ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುರಿತು ಮಾತನಾಡಿದ ಡಾ.ಉಮೇಶ್ ಜಾಧವ್ ಅವರು ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಇರುತ್ತಿದ್ದರೆ ನಾನು ಕಾಂಗ್ರೆಸ್ ಪಕ್ಷ ಬಿಡುವ ಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಸಚಿವ ಖರ್ಗೆ ಅವರ ಪುತ್ರ ವ್ಯಾಮೋಹದಿಂದ ಸಚಿವ ಸ್ಥಾನ ಕೈತಪ್ಪಿತು ಎಂದು ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.
ಸೋಮವಾರ ಕಾಂಗ್ರೆಸ್ ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಜಾಧವ್ ಅವರು ಬಿಜೆಪಿ ಸೇರುವ ಹಾದಿಯಲ್ಲಿದ್ದಾರೆ. ಕಲಬುರ್ಗಿಯಲ್ಲಿ ನಡೆಯುವ ಬಿಜೆಪಿ ಸಮಾರಂಭದಲ್ಲಿ ಮೋದಿ ಸಮ್ಮುಖದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.