ಚಿಂಚೋಳಿ: ಸಭಾಪತಿಗಳು ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸುವ ಭರವಸೆ ಇದೆ ಎಂದು ಚಿಂಚೋಳಿ ಶಾಸಕ ಡಾ. ಉಮೇಶ್ ಜಾಧವ್ ಹೇಳಿದ್ದಾರೆ.
ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಬಂಜಾರ ಸಮಾಜದ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಕೇಳಿದ್ದೇನೆ. ನನ್ನನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಸಿದ್ದರಾಮಯ್ಯ ಸಭಾಪತಿಗಳಿಗೆ ಪತ್ರ ಬರೆದಿರುವ ಕಾರಣ ಕಾನೂನು ಸಲಹೆ ಕೂಡ ಪಡೆದಿದ್ದೇನೆ. ಹೀಗಾಗಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದು ಜಾಧವ್ ತಿಳಿಸಿದ್ದಾರೆ.
ಚಿಂಚೋಳಿಯ ಪಂಗರಗಾ ಸೋನ್ಯಾಲಗಿರಿಯಲ್ಲಿ ನಡೆದ ಧರ್ಮಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬುಧವಾರ ಪ್ರಧಾನಿ ಮೋದಿ ಅವರು ಕಲಬುರಗಿಗೆ ಭೇಟಿ ನೀಡುವರು. ನಾನು ಬಿಜೆಪಿ ಸೇರುವ ಕುರಿತು ಬೆಂಬಲಿಗರೊಂದಿಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದರು.