News Kannada
Sunday, December 04 2022

ಕರ್ನಾಟಕ

ಅಪಘಾತದಲ್ಲಿ ಬಾಲಕ ಸಾವು: ರೊಚ್ಚಿಗೆದ್ದ ಸ್ಥಳೀಯರಿಂದ ಚಾಲಕನ ಹತ್ಯೆ

Photo Credit :

ಅಪಘಾತದಲ್ಲಿ ಬಾಲಕ ಸಾವು: ರೊಚ್ಚಿಗೆದ್ದ ಸ್ಥಳೀಯರಿಂದ ಚಾಲಕನ ಹತ್ಯೆ

ಆನೇಕಲ್: ಲಾರಿ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಬಾಲಕನೊಬ್ಬ ಸಾವನ್ನಪ್ಪಿದ್ದು, ರೊಚ್ಚಿಗೆದ್ದ ಸ್ಥಳೀಯರು ಅಪಘಾತಕ್ಕೆ ಕಾರಣ ಎನ್ನಲಾದ ಚಾಲಕನನ್ನು ಕೊಂದಿದ್ದಾರೆ. ಈ ಘಟನೆ ತಾಲ್ಲೂಕಿನ ಹೆಬ್ಬಗೋಡಿ ಬಳಿಯ ಅನಂತನಗರದಲ್ಲಿ ನಡೆದಿದೆ.

ಮೃತ ಬಾಲಕನನ್ನು ಮಹಮ್ಮದ್ ಆರ್ಫಾನ್(6) ಎಂದು ಗುರುತಿಸಲಾಗಿದ್ದು, ಜನರ ಥಳಿತದಿಂದ ಸಾವನ್ನಪ್ಪಿದ ಚಾಲಕನನ್ನು ಉತ್ತರ ಪ್ರದೇಶದ ರಾಜೇಶ್ ಶ್ಯಾಮ್ (34) ಎಂದು ಗುರುತಿಸಲಾಗಿದೆ.

ರಾಜೇಶ್ ಚಲಾಯಿಸುತ್ತಿದ್ದ ಲಾರಿ, ಸ್ಕೂಟರ್ ಡಿಕ್ಕಿ ಹೊಡೆದಿದ್ದು ಇದರಿಂದ ಸ್ಕೂಟರ್ ನಲ್ಲಿದ್ದ ಆರ್ಫಾನ್ ರಸ್ತೆಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕೂಡಲೇ ಸ್ಥಳಕ್ಕೆ ಬಂದ ಸ್ಥಳೀಯರು ಚಾಲಕನನ್ನು ಹಿಡಿದು ಥಳಿಸಿದ್ದಾರೆ. ಸ್ಥಳಕ್ಕೆ ಬಂದ ಹೆಬ್ಬಗೋಡಿ ಪೊಲೀಸರು ಚಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಆತ ಮೃತಪಟ್ಟಿದ್ದಾನೆ.

 

See also  ಹಿಮವದ್ ಗೋಪಾಲಸ್ವಾಮಿಬೆಟ್ಟಕ್ಕೆ ಮಿನಿಬಸ್ ಸೇವೆ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು