ಕಾರವಾರ: ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕೆಂದಳಗಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿದ ವ್ಯಕ್ತಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಕೆಂದಳಗಿ ಅರಣ್ಯ ಪ್ರದೇಶದಲ್ಲಿ ಐವರು ಬೇಟೆಗಾರರ ತಂಡ ಜಿಂಕೆಯನ್ನು ಬೇಟೆಯಾಡಿದ್ದರು. ಮಾಹಿತಿ ಪಡೆದ ತಕ್ಷಣ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಉಳಿದ ನಾಲ್ವರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ.
ಆರೋಪಿಗಳು ಬೇಟೆಯಾಡಿದ ಜಿಂಕೆ ಶವ ವಶಕ್ಕೆ ಪಡೆದು ಆರೋಪಿ ಬಳಿ ಇದ್ದ ಬೈಕ್ ಜಪ್ತಿ ಮಾಡಿಕೊಂಡಿದ್ದಾರೆ. ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು, ಅರಣ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಮುಂಡಗೋಡ ವಲಯದಲ್ಲಿ ಪ್ರಕರಣ ದಾಖಲಾಗಿದೆ.