ಮುಂಡಗೋಡ: ಟ್ರಾಕ್ಟರ್ ಕಾಲುವೆಗೆ ಉರುಳಿದ ಪರಿಣಾಮ ಒಬ್ಬ ಸಾವನ್ನಪ್ಪಿ ಚಾಲಕ ಗಂಭೀರ ಗಾಯಗೊಂಡ ಘಟನೆ ತಾಲ್ಲೂಕಿನ ಚಿಗಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಚಿಗಳ್ಳಿ ಗ್ರಾಮದ ಸಂದೀಪ್ ಬಂಕಾಪುರ ಎಂದು ಗುರುತಿಸಲಾಗಿದೆ. ಗಾಂಭೀರವಾಗಿ ಗಾಯಗೊಂಡ ಟ್ರಾಕ್ಟರ್ ಚಾಲಕ ದೀಪಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.