News Kannada
Friday, January 27 2023

ಕರ್ನಾಟಕ

ಆಸ್ತಿಗಾಗಿ ಚಿಕ್ಕಪ್ಪ- ಚಿಕ್ಕಮ್ಮನ ಕೊಂದು ಆತ್ಮಹತ್ಯೆಗೆ ಶರಣು

Photo Credit :

ಆಸ್ತಿಗಾಗಿ ಚಿಕ್ಕಪ್ಪ- ಚಿಕ್ಕಮ್ಮನ ಕೊಂದು ಆತ್ಮಹತ್ಯೆಗೆ ಶರಣು

ಶನಿವಾರಸಂತೆ: ಆಸ್ತಿ ಕಲಹಕ್ಕೆ ಸಂಬಂಧಿಸಿದಂತೆ ಯುವಕನೊಬ್ಬ ತನ್ನ ಚಿಕ್ಕಪ್ಪ, ಚಿಕ್ಕಮ್ಮನನ್ನು ಕತ್ತಿಯಿಂದ ಕಡಿದು ಭೀಕರವಾಗಿ ಕೊಲೆ ಮಾಡಿ ತಾನೂ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಆಲೂರು ಸಿದ್ದಾಪುರದಲ್ಲಿ ಬುಧವಾರ ಸಂಜೆ ನಡೆದಿದೆ.

ಇಲ್ಲಿಯ ನಿವಾಸಿ ನಿವೃತ್ತ ಪೊಲೀಸ್ ಪೇದೆ ಸೂದನ ಗಣೇಶ್(63) ಮತ್ತು ಪತ್ನಿ ಮೋಹಿನಿ (58) ಕೊಲೆಯಾದವರು. ಗಣೇಶ್ ಅಣ್ಣನ‌ ಮಗ ದಿಲೀಪ್ (32) ಕೊಲೆ ಮಾಡಿದ ನಂತರ ಆತ್ಮಹತ್ಯೆ ಮಾಡಿಕೊಂಡಾತ.

ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಗಣೇಶ್ ಮತ್ತು ದಿಲೀಪ್ ಕುಟುಂಬದ ಮಧ್ಯೆ ಹಿಂದಿನಿಂದಲೂ ಕಲಹಗಳು ನಡೆಯುತ್ತಿತ್ತು. ಬುಧವಾರ ಸಂಜೆಯೂ ಗಲಾಟೆ ನಡೆದಿದ್ದು, ಗಣೇಶ್ ಕತ್ತನ್ನು ದಿಲೀಪ್ ಕತ್ತರಿಸಿದ್ದಾನೆ. ಈ ವೇಳೆ ತಡೆಯಲು‌ ಬಂದ ಗಣೇಶ್ ಪತ್ನಿ ಮೋಹಿನಿಯ ಕತ್ತನ್ನೂ ನಿರ್ದಯವಾಗಿ ಕತ್ತರಿಸಿದ್ದಾನೆ. ಇಬ್ಬರ ರುಂಡ ಮುಂಡ ಬೇರೆ ಬೇರೆಯಾಗಿದೆ.

ಅಷ್ಟರಲ್ಲಿ ಅಡ್ಡ ಬಂದ ಗಣೇಶ್ ಪುತ್ರ ಹರ್ಷಿತ್ (23) ಮೇಲೂ ದಿಲೀಪ್ಕ ತ್ತಿಯಿಂದ ಹಲ್ಲೆ ಮಾಡಿದ್ದಾನೆ. ಮಾರಣಾಂತಿಕ ಗಾಯಗೊಂಡು ಸಾವು‌ ಬದುಕಿನ ಮಧ್ಯೆ ಹೋರಾಡುತ್ತಿರುವ ಹರ್ಷಿತ್‌ನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆ ನಂತರ ಗಣೇಶ್ ಅವರ ಮನೆಯಲ್ಲೇ ದಿಲೀಪ್ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವೃತ್ತನಿರೀಕ್ಷಕ ನಂಜುಂಡೇ ಗೌಡ, ಠಾಣಾಧಿಕಾರಿ ತಿಮ್ಮಶೆಟ್ಟಿ ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ. ಸಂಜೆ ವೇಳೆ ತಮ್ಮ ಊರಿನಲ್ಲಿ ನಡೆದ ಭೀಕರ ಘಟನೆಯಿಂದ ಸಂಪೂರ್ಣ ಗ್ರಾಮವೇ ಆತಂಕಕ್ಕೆ ಒಳಗಾಗಿದೆ.

 

See also  ಟೈಲರಿಂಗ್ ಕಲಿಸಿಕೊಡುವುದಾಗಿ ಹುಡುಗಿಯರ ಜತೆ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದವನಿಗೆ ಬಿತ್ತು ಜನರ ಧರ್ಮದೇಟು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು