News Kannada
Thursday, December 08 2022

ಕರ್ನಾಟಕ

ಜಾತ್ಯತೀತ ಶಕ್ತಿಗಳ ಒಗ್ಗೂಡುವಿಕೆಯಿಂದ ರಾಜಕಾರಣದ ಯುಗಾಂತರ : ಹೆಚ್.ವಿಶ್ವನಾಥ್ ಬಣ್ಣನೆ

Photo Credit :

ಜಾತ್ಯತೀತ ಶಕ್ತಿಗಳ ಒಗ್ಗೂಡುವಿಕೆಯಿಂದ ರಾಜಕಾರಣದ ಯುಗಾಂತರ : ಹೆಚ್.ವಿಶ್ವನಾಥ್ ಬಣ್ಣನೆ

ಮಡಿಕೇರಿ: ಕೋಮುವಾದಿಗಳನ್ನು ಮಣಿಸಲು ಜಾತ್ಯತೀತ ಶಕ್ತಿಗಳು ಒಗ್ಗೂಡಿರುವುದು ರಾಜ್ಯ ರಾಜಕಾರಣದ ಯುಗಾಂತರ ಮತ್ತು ದಿಕ್ಸೂಚಿ ಎಂದು ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಅಡಗೂರು ಹೆಚ್.ವಿಶ್ವನಾಥ್ ಬಣ್ಣಿಸಿದ್ದಾರೆ.

ನಗರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಮತ್ತು ನೂತನ ಅಧ್ಯಕ್ಷ ಕೆ.ಎಂ.ಗಣೇಶ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಂದೇ ವೇದಿಕೆಯಲ್ಲಿ ಜಾತ್ಯತೀತ ಶಕ್ತಿಗಳು ಒಗ್ಗೂಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಸೌಂದರ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಇಂದಿಗೂ ಕಾಂಗ್ರೆಸ್ ಪಕ್ಷ ತನ್ನ ತಾಯಿ ಇದ್ದಂತೆ. ಜೆಡಿಎಸ್ ನನ್ನ ದಮನಿ ದಮನಿಯಲ್ಲಿ ಜಾತ್ಯತೀತ ಶಕ್ತಿಯನ್ನು ಸಂಘಟಿಸಲು ಸ್ಫೂರ್ತಿಯನ್ನು ತುಂಬುವ ಪಕ್ಷವಾಗಿದೆಯೆಂದು ವಿಶ್ವನಾಥ್ ಸ್ಪಷ್ಟಪಡಿಸಿದರು.

ಜೆಡಿಎಸ್ ವೇದಿಕೆಯಲ್ಲಿ ಕಾಂಗ್ರೆಸ್ ನಾಯಕರು ಕಾಣಿಸಿಕೊಂಡಿರುವುದು ಸಂಭ್ರಮವನ್ನು ಹೆಚ್ಚಿಸಿದೆ ಎಂದರು. 2009 ರಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನನ್ನ ಪ್ರತಿಸ್ಪರ್ಧಿಗಳಾಗಿ ಸಿ.ಹೆಚ್. ವಿಜಯಶಂಕರ್ ಹಾಗೂ ಜೀವಿ ಜಯ ಸ್ಪರ್ಧಿಸಿದ್ದರು. ಅಂದು ನಾನು ಸಂಸದನಾಗಿ ಆಯ್ಕೆಯಾಗಿದ್ದೆ, ಇಂದು ಒಂದೇ ವೇದಿಕೆಯಲ್ಲಿ ನಾನು ಮತ್ತು ವಿಜಯಶಂಕರ್ ಒಂದಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಗಟ್ಟಿತನವೆಂದು ತಿಳಿಸಿದರು.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಹೆಚ್. ವಿಜಯ ಶಂಕರ್ ಮಾತನಾಡಿ, ಜೆಡಿಎಸ್ ಮತ್ತು ಕಾಂಗ್ರೆಸ್ ಒಂದೇ ವೇದಿಕೆಯಲ್ಲಿ ಸಂಗಮವಾಗಿರುವುದು ಹೆಮ್ಮೆಯ ವಿಚಾರವಾಗಿದೆ. ಇಲ್ಲಿ ಅಭ್ಯರ್ಥಿಯಾಗಿ ನಾನು ಸಂಕೇತ ಮಾತ್ರ. ಜಾತ್ಯತೀತ ಶಕ್ತಿಗಳು ಗೆಲುವು ಸಾಧಿಸಬೇಕಾಗಿದೆ ಎಂದರು. ಈ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಬಲವಾಗಿ ಬೇರೂರಿದ್ದು, ಮಾನಸಿಕವಾಗಿ ಎರಡೂ ಪಕ್ಷಗಳು ಒಗ್ಗಟ್ಟಾಗಿ ಶ್ರಮಿಸಿದರೆ ಸುಲಭ ಗೆಲುವು ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಕೆ.ಎಂ. ಗಣೇಶ್, ನಾನು ಯಾವುದೇ ಅಧಿಕಾರಕ್ಕಾಗಿ ಆಸೆ ಪಟ್ಟು ಜೆಡಿಎಸ್‍ಗೆ ಸೇರ್ಪಡೆಗೊಂಡಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ದುಡಿಯಲು ಆಗಮಿಸಿದ್ದೆ. ಆದರೆ, ಪಕ್ಷದ ವರಿಷ್ಟರು ಜಿಲ್ಲಾಧ್ಯಕ್ಷ ಸ್ಥಾನದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶ ನೀಡಿದ ಹಿನ್ನೆಲೆ ಪಕ್ಷವನ್ನು ಕಟ್ಟಿ ಬೆಳೆಸಲು ಶ್ರಮಿಸುತ್ತಿದ್ದೇನೆ. ಪಕ್ಷದ ಅಧ್ಯಕ್ಷ ಸ್ಥಾನ ಯಾರಿಗೂ ಶಾಶ್ವತವಲ್ಲ. ಆದರೆ, ಆ ಸ್ಥಾನದಲ್ಲಿದ್ದಾಗ ಏನು ಸಾಧನೆ ಮಾಡಿದ್ದೇನೆ ಎನ್ನುವುದು ಮುಖ್ಯ. ಮುಂದೆ ಲೋಕಸಭೆ, ನಗರಸಭೆÉ, ಗ್ರಾಮ ಪಂಚಾಯ್ತಿ ಹಾಗೂ ವಿಧಾನ ಸಭಾ ಚುನಾವಣೆಗಳು ಬಂದರು ಸ್ಪರ್ಧಿಸದೆ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದಕ್ಕೆ ಶ್ರಮಿಸುವುದಾಗಿ ತಿಳಿಸಿದರು.

ಕಾರ್ಯಕರ್ತರ ಬೆಂಬಲದೊಂದಿಗೆ ಪಕ್ಷ ಸಂಘÀಟಿಸುವುದಾಗಿ ತಿಳಿಸಿದ ಅವರು, ಎಲ್ಲರೂ ಒಗ್ಗಟ್ಟಾಗಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದರೊಂದಿಗೆ ಜಾತ್ಯತೀತ ನಿಲುವನ್ನು ಗಟ್ಟಿಗೊಳಿಸೋಣವೆಂದು ಗಣೇಶ್ ಕರೆ ನೀಡಿದರು.

ಜೆಡಿಎಸ್ ರಾಜ್ಯ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯ್ಯದ್ ಅಲ್ತಾಫ್, ಪ್ರಮುಖರಾದ ಪದ್ಮಿನಿ ಪೊನ್ನಪ್ಪ, ಸಿ.ವಿ. ನಾಗೇಶ್, ಜೆಡಿಎಸ್ ಮಾಜಿ ಅಧ್ಯಕ್ಷ ಸಂಕೇತ್ ಪೂವಯ್ಯ, ಪುಷ್ಪಾ ನಾಗರಾಜ್ ಮಾತನಾಡಿದರು.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮನ್ಸೂರ್ ಆಲಿ, ಉಪಾಧ್ಯಕ್ಷ ಎಂ.ಎಂ.ಶರೀಫ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಪ್ರಮುಖರಾದ ಕುಸುಮ್ ಕಾರ್ಯಪ್ಪ, ಮತೀನ್, ಸಿ.ಎಲ್. ವಿಶ್ವ, ಲೀಲಾ ಶೇಷಮ್ಮ ಮತ್ತಿತರರು ಉಪಸ್ಥಿತರಿದ್ದರು.

See also  ಮಡಿಕೇರಿ: ಗಾಳಿಮಳೆಗೆ ಧರೆಗುರುಳಿದ ಬೃಹತ್ ಮರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು