News Kannada
Friday, December 09 2022

ಕರ್ನಾಟಕ

ಮಂಡ್ಯದಲ್ಲಿ ಚಿನ್ನಾಭರಣಗಳ ಹರಾಜು ವಿರುದ್ಧ ರೈತರ ಪ್ರತಿಭಟನೆ

Photo Credit :

ಮಂಡ್ಯದಲ್ಲಿ ಚಿನ್ನಾಭರಣಗಳ ಹರಾಜು ವಿರುದ್ಧ ರೈತರ ಪ್ರತಿಭಟನೆ

ಮಂಡ್ಯ: ಮಂಡ್ಯದಲ್ಲಿ ಒಂದೆಡೆ ಚುನಾವಣಾ ಭರಾಟೆ ನಡೆಯುತ್ತಿದ್ದು, ರಾಜಕೀಯ ಪಕ್ಷಗಳು ತಾವು ರೈತರ ಪರ ಎನ್ನುತ್ತಾ ಪ್ರಚಾರ ನಡೆಸುತ್ತಿದ್ದರೂ ಇತ್ತ ರೈತರ ಸಂಕಷ್ಟಕ್ಕೆ ಸ್ಪಂದಿಸುವವರೇ ಇಲ್ಲದಾಗಿದ್ದು, ಬ್ಯಾಂಕಿನಲ್ಲಿ ಚಿನ್ನಾಭರಣ ಅಡವಿಟ್ಟು ಸಾಲ ಪಡೆದ ರೈತರು ಇದೀಗ ಚಿನ್ನವನ್ನು ಕಳೆದುಕೊಳ್ಳುವ ಸ್ಥಿತಿಗೆ ಬಂದು ತಲುಪಿದ್ದಾರೆ.

ಹೀಗಾಗಿಯೇ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ರೈತರು ಬ್ಯಾಂಕುಗಳಲ್ಲಿ ಗಿರವಿ ಇಟ್ಟಿರುವ ಚಿನ್ನಾಭರಣಗಳನ್ನು ಹರಾಜು ಹಾಕಲು ಮುಂದಾಗಿರುವ ಬ್ಯಾಂಕಿನ ಕ್ರಮವನ್ನು ವಿರೋಧಿಸಿ ತಾಲೂಕಿನ ಹೊಳಲು ಗ್ರಾಮದ ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಶಾಖೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಹೊಳಲು ಗ್ರಾಮದಲ್ಲಿರುವ ಎಸ್‍ಬಿಐ ಬ್ಯಾಂಕಿನ ಮುಂದೆ ಜಮಾಯಿಸಿದ ರೈತರು, ಬ್ಯಾಂಕಿನ ಧೋರಣೆಯನ್ನು ಖಂಡಿಸಿ, ನೋಟಿಸ್‍ಗಳನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಸತತ ನಾಲ್ಕೈದು ವರ್ಷಗಳಿಂದಲೂ ಬರದಿಂದ ರೈತರು ತತ್ತರಿಸಿದ್ದಾರೆ. ಬೆಳೆ ನಷ್ಟ ಹಾಗೂ ಬೆಲೆ ನಷ್ಟ ಎರಡನ್ನೂ ಅನುಭವಿಸಿದ್ದಾರೆ. ಪಡೆದ ಸಾಲ ತೀರಿಸಲಾಗದೆ ಆದಾಯ ಬಾರದೆ, ದಿಕ್ಕು ತೋಚದಂತಾಗಿ ರೈತ ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾನೆ. ಸರ್ಕಾರ ಮಂಡ್ಯ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದು, ಯಾವುದೇ ರೈತರಿಗೆ ನೋಟಿಸ್ ನೀಡುವುದಾಗಲೀ, ಹರಾಜು ಪ್ರಕ್ರಿಯೆ ನಡೆಸುವಂತಿಲ್ಲ ಎಂಬ ಆದೇಶವಿದ್ದರೂ ಬ್ಯಾಂಕುಗಳು ರೈತರಿಗೆ ನೋಟಿಸ್ ಕೊಟ್ಟು ಮಾನಸಿಕವಾಗಿ ಕಿರುಕುಳ ನೀಡುತ್ತಿವೆ ಎಂದು ದೂರಿದ್ದಾರೆ.

ಸರ್ಕಾರದ ಆದೇಶವನ್ನು ಧಿಕ್ಕರಿಸಿರುವ ಬ್ಯಾಂಕಿನ ಆಡಳಿತ ಮಂಡಳಿ ರೈತರಿಗೆ ನೋಟೀಸ್ ನೀಡಿ ರೈತರು ಗಿರವಿ ಇಟ್ಟಿರುವ ಒಡವೆಗಳನ್ನು ಹರಾಜು ಮಾಡಲು ಮುಂದಾಗಿವೆ. ಇದರಿಂದ ಮನನೊಂದ ರೈತ ಆತ್ಮಹತ್ಯೆಗೆ ಬ್ಯಾಂಕಿನವರೇ ಕಾರಣರಾಗುತ್ತಾರೆ ಎಂದು ಆರೋಪಿಸಿದ್ದಾರೆ.

ಬ್ಯಾಂಕಿನ ಅಧಿಕಾರಿಗಳೊಂದಿಗೆ ಈಗಾಗಲೇ ಮುಖ್ಯಮಂತ್ರಿಗಳು, ಸಚಿವರು, ಜಿಲ್ಲಾಧಿಕಾರಿಗಳು ಸಭೆ ನಡೆಸಿ ರೈತರಿಗೆ ಯಾವುದೇ ಕಾರಣಕ್ಕೂ ನೋಟೀಸ್ ನೀಡುವುದಾಗಲೀ ಅಥವಾ ಅವರ ಚಿನ್ನಾಭರಣಗಳನ್ನು ಹರಾಜು ಹಾಕುವುದಾಗಲಿ ಮಾಡಬಾರದು ಎಂದು ಸೂಚನೆ ನೀಡಿದ್ದರೂ ಅಂತಹ ಆದೇಶವನ್ನು ಬ್ಯಾಂಕ್ ಅಧಿಕಾರಿಗಳು ಗಾಳಿಗೆ ತೂರಿದ್ದಾರೆ ಎಂದು ದೂರಿದ್ದಾರೆ.

See also  ಯುವ ಛಾಯಾಗ್ರಾಹಕ ನಿಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು