ಮಡಿಕೇರಿ : ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ 543 ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿಗಳ ನಿಯೋಜನೆ ಸಂಬಂಧ ರ್ಯಾಂಡಮೈಸೇಷನ್(ಸಮ್ಮಿಶ್ರ) ಪ್ರಕ್ರಿಯೆಯು ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಕೇಂದ್ರದ ಕಚೇರಿಯಲ್ಲಿ ಮಂಗಳವಾರ ನಡೆಯಿತು.
ಚುನಾವಣಾ ಸಾಮಾನ್ಯ ವೀಕ್ಷಕರಾದ ಕುಲದೀಪ್ ನಾರಾಯಣ, ಪೊಲೀಸ್ ವೀಕ್ಷಕರಾದ ವಿಕಾಸ್ ಪಾಠಕ್ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವಮೂರ್ತಿ, ಸಹಾಯಕ ಚುನಾವಣಾಧಿಕಾರಿಗಳಾದ ಟಿ.ಜವರೇಗೌಡ, ಶ್ರೀನಿವಾಸ ಅವರ ಉಪಸ್ಥಿತಿಯಲ್ಲಿ ರ್ಯಾಂಡಮೈಸೇಷನ್ ಪ್ರಕ್ರಿಯೆ ನೆರವೇರಿತು.
ಜಿಲ್ಲೆಯಲ್ಲಿನ ಪಿಆರ್ಒ, ಎಪಿಆರ್ಒ, 2 ನೇ, 3 ನೇ ಮತ್ತು 4 ನೇ ಮತಗಟ್ಟೆ 543 ಮತಗಟ್ಟೆಗಳಿಗೆ ಅಧಿಕಾರಿಗಳ ನಿಯೋಜನೆಯನ್ನು ರ್ಯಾಂಡಮೈಸೇಷನ್ ಪ್ರಕ್ರಿಯೆ ಮೂಲಕ ಮಾಡಲಾಯಿತು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ರ್ಯಾಂಡಮೈಸೇಷನ್ ಪ್ರಕ್ರಿಯೆ ಸಂಬಂಧಿಸಿದಂತೆ ಮಾಹಿತಿ ನೀಡಿದರು. ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಕೇಂದ್ರದ ಅಧಿಕಾರಿ ಅಜೀತ್, ಚುನಾವಣಾ ತಹಶೀಲ್ದಾರ್ ಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೊ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಚುನಾವಣಾ ವೀಕ್ಷಕರ ನೋಡಲ್ ಅಧಿಕಾರಿ ಪ್ರಮೋದ್, ಅನಿಲ್ ಕುಮಾರ್ ಇತರರು ಹಾಜರಿದ್ದರು.