News Kannada
Thursday, December 08 2022

ಕರ್ನಾಟಕ

ಸುಮಲತಾಗೆ ಕೈ-ಬಿಜೆಪಿ-ತೆನೆ ಕಾರ್ಯಕರ್ತರಿಂದಲೂ ಬೆಂಬಲ

Photo Credit :

ಸುಮಲತಾಗೆ ಕೈ-ಬಿಜೆಪಿ-ತೆನೆ ಕಾರ್ಯಕರ್ತರಿಂದಲೂ ಬೆಂಬಲ

ಮಂಡ್ಯ: ಮಂಡ್ಯ ಲೋಕ ಸಭಾ ಚುನಾವಣೆಯ ಕಾವು ತಾರಕಕ್ಕೇರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್‍ಗೆ ಬಿಜೆಪಿ, ಕಾಂಗ್ರೆಸ್, ರೈತಸಂಘ ಸಂಪೂರ್ಣ ಬೆಂಬಲ ನೀಡಿದ್ದು, ಇದೀಗ ಕೆಲವು ಜೆಡಿಎಸ್ ಕಾರ್ಯಕರ್ತರು ಬೆಂಬಲಿಸುತ್ತಿರುವುದು ಕಂಡು ಬಂದಿದೆ.

ಮಂಡ್ಯ ತಾಲೂಕಿನ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಹನಿಯಂಬಾಡಿ ಗ್ರಾಮದಲ್ಲಿ ಬಿಜೆಪಿ, ಕಾಂಗ್ರೆಸ್ ಜೊತೆಗೆ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ಬಾವುಟ ಹಿಡಿದು ಗ್ರಾಮಕ್ಕೆ ಆಗಮಿಸಿದ ಸುಮಲತಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದು ಕಂಡು ಬಂದಿದ್ದು ಇದು ಜೆಡಿಎಸ್ ಮುಖಂಡರ ರೋಷದ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಈ ಸಂದರ್ಭ ಮಾತನಾಡಿದ ಸುಮಲತಾ ಅವರು, ನಾನು ಅಧಿಕಾರದ ಆಸೆಯಿಂದ ರಾಜಕೀಯಕ್ಕೆ ಬಂದಿಲ್ಲ. ಅಂಬರೀಶ್ ಅವರ ಮೇಲೆ ನೀವು ತೋರಿದ ಪ್ರೀತಿ, ಜಿಲ್ಲೆಯ ಅಭಿವೃದ್ಧಿಗೆ ಅವರು ಕಂಡಿದ್ದ ಕನಸನ್ನು ನನಸು ಮಾಡುವ ಸಲುವಾಗಿ ಜನರ ಒತ್ತಡದಿಂದ ಅಭ್ಯರ್ಥಿಯಾಗಿದ್ದೇನೆ. ಆದ್ದರಿಂದ ಒಮ್ಮೆ ನನಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು. ಇದೇ ಸಂದರ್ಭ ಮಂಗಲ, ಹೆಬ್ಬಕವಾಡಿ, ಕಾರಸವಾಡಿ, ಸಂತೆ ಕಸಲಗೆರೆ, ಮಂಡ್ಯ ನಗರದ ವಿನಾಯಕ ಬಡಾವಣೆಯಲ್ಲಿ ಪ್ರಚಾರ ನಡೆಸಿ, ಮತಯಾಚಿಸಿದರು.

ಸುಮಲತಾ ಅವರಿಗೆ ಬಿಜೆಪಿ ಮುಖಂಡ ಸಿದ್ದರಾಮಯ್ಯ ಸಾಥ್ ನೀಡಿದ್ದು ಕಂಡು ಬಂದಿತು.

See also  ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಪೊಲಿಂಕಾನ ಉತ್ಸವ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು