News Kannada
Thursday, December 01 2022

ಕರ್ನಾಟಕ

ಅನಂತಕುಮಾರ್ ಆಪ್ತರ ಮನೆಯಲ್ಲಿ ದಾಖಲೆಗಳಿಲ್ಲದ 82 ಲಕ್ಷ ರೂ. ವಶಕ್ಕೆ - 1 min read

Photo Credit :

ಅನಂತಕುಮಾರ್ ಆಪ್ತರ ಮನೆಯಲ್ಲಿ ದಾಖಲೆಗಳಿಲ್ಲದ 82 ಲಕ್ಷ ರೂ. ವಶಕ್ಕೆ

ಕಾರವಾರ: ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಆಪ್ತರ ಮನೆಯ ಮೇಲೆ ಶಿರಸಿಯಲ್ಲಿ ಮಂಗಳವಾರ ಚುನಾವಣಾ ವಿಚಕ್ಷಣಾ ದಳ ಹಾಗೂ ಆದಾಯ ತೆರಿಗೆ ಇಲಾಖೆ ಸೇರಿ ನಡೆಸಿ ದಾಖಲೆಗಳಿಲ್ಲದ ಒಟ್ಟೂ 82 ಲಕ್ಷ ರೂ. ಹಾಗೂ 6.5 ಲಕ್ಷ ರೂ. ಮೌಲ್ಯದ ಚಿನ್ನವನ್ನು ದಾಳಿ ನಡೆಸಿ ವಶಪಡಿಸಿಕೊಳ್ಳಲಾದ ಈ ಬಗ್ಗೆ ಜಿಲ್ಲಾಡಳಿತ ದಾಖಲೆಗಳನ್ನು ನೀಡಿದೆ.

ಮಂಗಳವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ಆಪ್ತರು ಎಂದು ಹೇಳಲಾದ ಶಿರಸಿಯ ಕೃಷ್ಣ ಎಸಳೆ, ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಜಿ. ನಾಯ್ಕ ಹಾಗೂ ಬಿಜೆಪಿ ಗ್ರಾಮೀಣ ಅಧ್ಯಕ್ಷ ರಮಾನಂದ ಹೆಗಡೆ ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿ ಹಣ ಹಾಗೂ ಇತರ ಸ್ವತ್ತನ್ನು ವಶಕ್ಕೆ ಪಡೆದಿದ್ದರು. ಒಟ್ಟೂ 82.70 ಲಕ್ಷ ರೂ. ಹಣ ಹಾಗೂ 6.50 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಈ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದು ಈ ಕುರಿತು ತನಿಖೆ ಮುಂದುವರೆದಿದೆ.

ಈ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ. ಹರೀಶಕುಮಾರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದು ಹಣವು ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಹಂಚಿಕೆಗಾಗಿ ಬಳಸಲಾಗುತ್ತಿರುವ ಬಗ್ಗೆಯಾಗಲೀ ಅಥವಾ ಯಾವುದೇ ಅಭ್ಯರ್ಥಿಯ ಹಣ ಎನ್ನುವುದರ ಬಗ್ಗೆ ಸಾಕ್ಷಿಗಳು ದೊರೆತಿಲ್ಲ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಈ ಬಗ್ಗೆ ತನಿಖೆ ಮುಂದುವರೆಸಿದ್ದು ಅವರು ನೀಡುವ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

ಶಿರಸಿಯಲ್ಲಿ ಚುನಾವಣಾ ವಿಷಯಕ್ಕೆ ಸಂಬಂಧಿಸಿದಂತೆ ಹಂಚಿಕೆ ಮಾಡಲು ಕಾರೊಂದರಲ್ಲಿ ಹಣ ಸಾಗಿಸಲಾಗುತ್ತಿದೆ ಎಂದು ಖಚಿತ ಮಾಹಿತಿಯ ಮೇರೆಗೆ ಮಂಗಳವಾರ ಚುನಾವಣಾ ವಿಷಕ್ಷಣ ದಳ ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಾಹನವನ್ನು ವಶಕ್ಕೆ ಪಡೆದಾಗ ಅದರಲ್ಲಿ 9 ಲಕ್ಷಕ್ಕೂ ಹೆಚ್ಚಿನ ಹಣ ಪತ್ತೆಯಾಗಿದೆ. ಹಣದ ಪ್ರಮಾಣ ಹೆಚ್ಚಾಗಿರುವ ಕಾರಣ ಅದನ್ನು ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಲಾಗಿದೆ. ಬಳಿಕ ವಾಹನದಲ್ಲಿದ್ದವರನ್ನು ವಿಚಾರಿಸಿದಾಗ ದೊರೆತ ಹೆಚ್ಚಿನ ಮಾಹಿತಿಯ ಆಧಾರದ ಮೇಲೆ ಐಟಿ ಅಧಿಕಾರಿಗಳು ಮೂವರ ಮನೆಯ ಮೆಲೆ ದಾಳಿ ನಡೆಸಿ ಅಲ್ಲಿಂದಲೂ ಹಣ ಹಾಗೂ ಇತರ ಸ್ವತ್ತನ್ನು ವಶಕ್ಕೆ ಪಡೆದಿದ್ದಾರೆ ಎಂದರು.

See also  ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ನೆರವು ನೀಡಿದ ನಿಖಿಲ್ ಕುಮಾರಸ್ವಾಮಿ!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು