News Kannada
Saturday, December 03 2022

ಕರ್ನಾಟಕ

ಮೋದಿ ಹೆಸರಿನಲ್ಲಿ ಮತಯಾಚನೆ ದೇಶದ ಭವಿಷ್ಯಕ್ಕೆ ಸೂಕ್ತವಲ್ಲ: ಕಲ್ಲಡ್ಕ ಪ್ರಭಾಕರ ಭಟ್

Photo Credit :

ಮೋದಿ ಹೆಸರಿನಲ್ಲಿ ಮತಯಾಚನೆ ದೇಶದ ಭವಿಷ್ಯಕ್ಕೆ ಸೂಕ್ತವಲ್ಲ: ಕಲ್ಲಡ್ಕ ಪ್ರಭಾಕರ ಭಟ್

ಮಡಿಕೇರಿ: ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಅಭ್ಯರ್ಥಿಗಳು ಚುನಾವಣಾ ಪ್ರಚಾರ ನಡೆಸುವುದು ದೇಶದ ಭವಿಷ್ಯದ ದೃಷ್ಟಿಯಿಂದ ಅಷ್ಟೇನೂ ಸೂಕ್ತವಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಕ್ಷೇತ್ರಿಯ ಕಾರ್ಯಕಾರಿಣಿ ಸದಸ್ಯ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅಭಿಪ್ರಾಯಪಟ್ಟಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಪ್ರಭಾಕರ ಭಟ್, ಮೋದಿ ಅವರ ಸಾಧನೆ ಹೆಸರಿನಲ್ಲಿ ಮತಕೇಳುವುದಕ್ಕಿಂತ ಆಯಾ ಕ್ಷೇತ್ರದ ಅಭ್ಯರ್ಥಿ ತಾನು ಮಾಡಿದ, ಮಾಡಲಿರುವ ಸಾಧನೆಯನ್ನು ಹೇಳಿಕೊಂಡು ಮತಕೇಳುವುದು ಸೂಕ್ತ. ಮೋದಿ ಅವರ ಸಹಕಾರದಿಂದ ತಾನು ಕ್ಷೇತ್ರದ ಜನತೆಗಾಗಿ ಮಾಡಿರುವ ಸಾಧನೆ ಏನು ಎನ್ನುವುದನ್ನು ಅಭ್ಯರ್ಥಿಗಳು ಬಿಂಬಿಸಿಕೊಳ್ಳುವ ಮೂಲಕ ಮತಯಾಚಿಸಬೇಕೆಂದರು.

ಓರ್ವ ವ್ಯಕ್ತಿಯ ಸಾಧನೆಗಳನ್ನು ಬಿಂಬಿಸಿಕೊಂಡು ಮತಕೇಳುವುದು ದೇಶದ ಭವಿಷ್ಯದ ಹಿತದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ. ವ್ಯಕ್ತಿ ಪೂಜೆ ನಮ್ಮ ಸಂಸ್ಕೃತಿಯಲ್ಲ ಎಂದೂ ಪ್ರಭಾಕರ ಭಟ್ ಹೇಳಿದರು.

ಬಿಜೆಪಿಯಲ್ಲಿ ಮೋದಿ ಅವರನ್ನೇ ಮುಂದಿನ ಪ್ರಧಾನಿಯಾಗಿ ಎಲ್ಲರೂ ಒಪ್ಪಿಕೊಂಡಿದ್ದಾರೆ. ಹೀಗಾಗಿ ಮೋದಿ ಹೆಸರಿನಲ್ಲಿ ಮತಕೇಳುತ್ತಿದ್ದಾರೆ, ಆದರೆ ಮಹಾಘಟಬಂಧನ್ ನಲ್ಲಿ ರಾಹುಲ್, ಮಾಯಾವತಿ, ಮಮತಾ ಬ್ಯಾನರ್ಜಿ, ದೇವೇಗೌಡ ಸೇರಿದಂತೆ ಯಾರು ಪ್ರಧಾನಿ ಎಂದೇ ಬಿಂಬಿಸುತ್ತಿಲ್ಲ. ಇದು ಮಹಾಘಟಬಂಧನ್ ನಾಯಕರ ಹತಾಶೆಯನ್ನು ಪ್ರದರ್ಶಿಸುತ್ತದೆ ಎಂದೂ ಡಾ.ಪ್ರಭಾಕರ ಭಟ್ ಟೀಕಿಸಿದರು.

See also  ದಲಿತರಿಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು