News Kannada
Tuesday, December 06 2022

ಕರ್ನಾಟಕ

ಜೆಡಿಎಸ್ ಎಂದಿಗೂ ದ್ವೇಷದ ರಾಜಕಾರಣ ಮಾಡಲ್ಲ: ನಿಖಿಲ್ ಕುಮಾರಸ್ವಾಮಿ

Photo Credit :

ಜೆಡಿಎಸ್ ಎಂದಿಗೂ ದ್ವೇಷದ ರಾಜಕಾರಣ ಮಾಡಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಜೆಡಿಎಸ್ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ಅದರ ಅವಶ್ಯಕತೆಯೂ ಇಲ್ಲ ಎಂದು ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಬುಧವಾರ ನಗರದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸ್ವಾಭಿಮಾನಕ್ಕೆ ಮತ ಹಾಕಿ ಎಂದು ಹೇಳುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸ್ವಾಭಿಮಾನದ ಅರ್ಥ ಏನೆಂಬುದನ್ನು ತಿಳಿದು ಮಾತನಾಡಲಿ ಎಂದರಲ್ಲದೆ, ನಾನು ನಾಮಪತ್ರ ಸಲ್ಲಿಸುವ ದಿನ ಒಂದೂವರೆ ಲಕ್ಷದಿಂದ ಎರಡು ಲಕ್ಷ ಜನರು ಸೇರಿದ್ದರು. ಆ ಜನರನ್ನು ನೋಡಿ ಒಂದು ಸಾವಿರ, ಎರಡು ಸಾವಿರ ರೂ. ಹಣ ಕೊಟ್ಟು ಜನರನ್ನು ಕರೆತಂದಿದ್ದಾರೆ ಎಂದು ಹೇಳಿದ್ದಾರೆ. ಹೀಗಿರುವಾಗ ಅದೇ ಜನರ ಮುಂದೆ ಸ್ವಾಭಿಮಾನಕ್ಕೆ ಮತ ಹಾಕಿ ಎಂದು ಹೇಳುವುದರಲ್ಲಿ ಯಾವ ಅರ್ಥವಿದೆ ಎಂದು ಪ್ರಶ್ನಿಸಿದರು.

ರಾಜಕಾರಣದಲ್ಲಿ ಜೆಡಿಎಸ್ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ. ನಾವು ಯಾರನ್ನು, ಯಾವ ರೀತಿ ಟಾರ್ಗೆಟ್ ಮಾಡಿದ್ದೇವೆ ಅನ್ನೋದನ್ನ ಬಿಡಿಸಿ ಹೇಳಲಿ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅವರಿಗೆ ಮಾಡಲು ಬೇಕಾದಷ್ಟು ಕೆಲಸವಿದೆ. ಅದರ ಬಗ್ಗೆ ಯೋಚನೆ ಮಾಡುವುದಕ್ಕೂ ಅವರಿಗೆ ಪುರುಸೊತ್ತಿಲ್ಲ. ಸುಮ್ಮನೆ ಟಾರ್ಗೆಟ್ ಮಾಡುತ್ತಿದ್ದೇವೆ ಅಂತ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ. ಅಂತಹ ಮಾತುಗಳಿಗೆ ಪ್ರತಿಕ್ರಿಯೆ ನೀಡುವ ಅಗತ್ಯವೂ ಇಲ್ಲ ಎಂದರು.

ಫಲಿತಾಂಶದ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸವಿದೆ. ಏಕೆಂದರೆ, ನಾನು ತಳಮಟ್ಟದಿಂದ ಜನಾಭಿಪ್ರಾಯ ಸಂಗ್ರಹಿಸಿರುವಂತೆ ಜಿಲ್ಲೆಯ ಜನರು ಅಷ್ಟು ಸುಲಭವಾಗಿ ದೇವೇಗೌಡರ ಕುಟುಂಬವನ್ನು ಕೈಬಿಡುವುದಿಲ್ಲ. ನನಗೂ ಒಂದು ಅವಕಾಶ ಮಾಡಿಕೊಡುತ್ತಾರೆ ಎಂಬ ಅಚಲವಾದ ನಂಬಿಕೆ ಇದೆ. ಅದು ಮೇ 23ರಂದು ಬಹಿರಂಗವಾಗಲಿದೆ ಎಂದು ಹೇಳಿದರು.

ಚುನಾವಣಾ ಫಲಿತಾಂಶದ ಬಗ್ಗೆ ಯಾರೂ ಬೆಟ್ಟಿಂಗ್ ಕಟ್ಟಬಾರದು. ಇದು ಆರೋಗ್ಯಕರ ಬೆಳವಣಿಗೆಯಲ್ಲ ಎಂದು ಹೇಳಿದರು. ನಾನು ಮಂಡ್ಯದಲ್ಲಿ ಜಮೀನು ಖರೀದಿಸಿ ತೋಟದ ಮನೆ ಮಾಡಬೇಕೆಂದಿರುವುದು ನಿಜ. ಆದರೆ, ಅದು ಒಂದೆರಡು ದಿನದಲ್ಲಿ ಆಗುವ ಕೆಲಸವಲ್ಲ. ನಾಲ್ಕಾರು ತಿಂಗಳು ಬೇಕು. ನಾನು ಎಲ್ಲಿಯೂ ಹೋಗುವುದಿಲ್ಲ. ಇಲ್ಲೇ ಇರುತ್ತೇನೆ. ನಿಮಗೇನಾದರೂ ನನ್ನ ಬಗ್ಗೆ ಸಂಶಯವಿದೆಯಾ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಬೆಂಬಲದಿಂದ ಚುನಾವಣೆ ಎದುರಿಸಿದ್ದೇನೆ.ಕಾಂಗ್ರೆಸ್ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ. ಆ ಪಕ್ಷದ ಕೆಲವರು ಮೈತ್ರಿ ಧರ್ಮದಂತೆ ಜೆಡಿಎಸ್ ಪರವಾಗಿ ಬಂದು ಚುನಾವಣಾ ಕೆಲಸ ಮಾಡಿಲ್ಲ. ಅದಕ್ಕೆ ನಾವೇನೂ ಮಾಡಲಾಗುವುದಿಲ್ಲ. ಪಕ್ಷ ವಿರೋಧಿ ನಡೆ ವಿರುದ್ಧ ಆ ಪಕ್ಷದ ಹೈಕಮಾಂಡ್ ಕ್ರಮ ಕೈಗೊಳ್ಳಬೇಕೇ ವಿನಃ ನಮಗೆ ಆ ಅಧಿಕಾರವಿಲ್ಲ ಎಂದು ಇದೇ ವೇಳೆ ಹೇಳಿದರು.

ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಇದ್ದರು.

See also  ಬಾಗಲಕೋಟೆ: ಮಳೆಗೆ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು