News Kannada
Tuesday, December 06 2022

ಕರ್ನಾಟಕ

ನಾವು ಯಾರನ್ನೂ ಪಕ್ಷಕ್ಕೆ ಬನ್ನಿ ಎಂದು ಆಹ್ವಾನಿಸಿಲ್ಲ: ಯಡಿಯೂರಪ್ಪ

Photo Credit :

ನಾವು ಯಾರನ್ನೂ ಪಕ್ಷಕ್ಕೆ ಬನ್ನಿ ಎಂದು ಆಹ್ವಾನಿಸಿಲ್ಲ: ಯಡಿಯೂರಪ್ಪ

ಶಿವಮೊಗ್ಗ: ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಸೇರುವ ಕುರಿತು ಸ್ಪಷ್ಟಪಡಿಸದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡ್ಡಿಯೂರಪ್ಪ, ನಾವು ಯಾರನ್ನೂ ಪಕ್ಷಕ್ಕೆ ಬನ್ನಿ ಎಂದು ಆಹ್ವಾನಿಸಿಲ್ಲವೆಂದು ಹೇಳಿದರು.

ಈ ಬಗ್ಗೆ ಶಿವಮೊಗ್ಗದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮೇ.23ರ ನಂತರ ಸರ್ಕಾರ ತಾನಾಗಿಯೇ ಬೀಳಲಿದೆ ಎಂದು ಪುನರುಚ್ಚರಿಸಿದರು. ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ 14 ಕ್ಷೇತ್ರಕ್ಕೆ ಕನಿಷ್ಠ ಈ ಬಾರಿ 12 ಸ್ಥಾನ ಪಡೆದುಕೊಳ್ಳಲಿದ್ದೇವೆ. ಕಳೆದ ಬಾರಿ 11 ಕ್ಷೇತ್ರವನ್ನು ಬಿಜೆಪಿ ತನ್ನದಾಗಿಸಿಕೊಂಡಿತ್ತು. ಜೊತೆಗೆ ಏ.18 ರಂದು ನಡೆದ 14 ಸ್ಥಾನಗಳಲ್ಲಿ 10 ಸ್ಥಾನವನ್ನು ಬಿಜೆಪಿ ಗೆದ್ದು ಬೀಗಲಿದೆ. ಯಾವಾಗ ರಾಜ್ಯದಲ್ಲಿ ಬಿಜೆಪಿ 22 ಕ್ಷೇತ್ರವನ್ನು ಗೆಲ್ಲುತ್ತದೆಯೋ ಆಗ ಮೈತ್ರಿ ಸರ್ಕಾರ ತಾನಾಗಿಯೇ ಬೀಳಲಿದೆ ಎಂದು ವಿವರಿಸಿದರು.

ಈ ಬಾರಿಯ ಚುನಾವಣೆ ಮೋದಿಯ ಪರ ಅಲೆ ಇದೆ. ಹಾಗಾಗಿ 22 ಕ್ಷೇತ್ರವನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಉಮೇಶ್ ಜಾದವ್ ರಾಜೀನಾಮೆಯಿಂದಾಗಿ ಚಿಂಚೊಳ್ಳಿ ವಿಧಾನಸಭಾ ಕ್ಷೇತ್ರ ಕ್ಕೆ ಮೇ 19ರಂದು ಚುನಾವಣೆ ಘೋಷಣೆಯಾಗಿದೆ. ಈ ಬೆನ್ನಲ್ಲಿ ನಾಮಪತ್ರ ಪ್ರಕ್ರಿಯೆ ಆರಂಭಗೊಂಡಿದೆ. ಹಾಗಾಗಿ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ನಾಳೆ ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೂ ಸಹ ನಾಳೆ ಬೆಂಗಳೂರಿನಲ್ಲಿ ನಡೆಯುವ ಇದೇ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದರು.

See also  ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ: ಮೂವರು ಸಾವು, ಒಬ್ಬನ ಸ್ಥಿತಿ ಚಿಂತಾಜನಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು