News Kannada
Sunday, November 27 2022

ಕರ್ನಾಟಕ

ಕುಡಿಯುವ ನೀರಿನ ಸಮಸ್ಯೆ: ತಕ್ಷಣ ಸ್ಪಂದಿಸಲು ಎಡಿಸಿ ಪಿ.ಶಿವರಾಜು ನಿರ್ದೇಶನ - 1 min read

Photo Credit :

ಕುಡಿಯುವ ನೀರಿನ ಸಮಸ್ಯೆ: ತಕ್ಷಣ ಸ್ಪಂದಿಸಲು ಎಡಿಸಿ ಪಿ.ಶಿವರಾಜು ನಿರ್ದೇಶನ

ಮಡಿಕೇರಿ: ಜಿಲ್ಲೆಯ ನಾನಾ ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಇಂತಹ ಕಡೆಗಳಲ್ಲಿ ತ್ವರಿತವಾಗಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರು ಹಾಗೂ ಬರ ನಿರ್ವಹಣೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರು ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಂಬಂಧ ಸಮಸ್ಯೆಗಳು ಕೇಳಿ ಬಂದಲ್ಲಿ ತಕ್ಷಣವೇ ತಹಶೀಲ್ದಾರ್‍, ಸಂಬಂಧಪಟ್ಟ ಎಂಜಿನಿಯರ್‍ ಗಳು ಸ್ಥಳಕ್ಕೆ ಭೇಟಿ ನೀಡಿ ಪರಿಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ ಇದೆ ಎಂಬ ದೂರುಗಳು ಕೇಳಿ ಬರದಂತೆ ನೋಡಿಕೊಳ್ಳುವುದು ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸುವಂತೆ ಪಿ.ಶಿವರಾಜು ಅವರು ನಿರ್ದೇಶನ ನೀಡಿದರು.

ಜಾನುವಾರುಗಳಿಗೆ ಮೇವು, ಗೋಶಾಲೆ ತೆರೆಯುವುದು, ಮೇವು ಬ್ಯಾಂಕ್ ನಿರ್ಮಾಣ ಮತ್ತಿತರ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕುಡಿಯುವ ನೀರಿನ ಸಮಸ್ಯೆ: ಈ ಸಂಖ್ಯೆಗಳಿಗೆ ಕರೆ ಮಾಡಿ
ಕಾರ್ಯಪಾಲಕ ಎಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಮಡಿಕೇರಿ ದೂ.ಸಂ: 08272-298845, ಮೊ.ಸಂ: 9448160547.

ಗವೀ ಸಿದ್ದಯ್ಯ, ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಮಡಿಕೇರಿ ಕಚೇರಿ ದೂ.ಸಂ.08272-221845, ದೂ.ಸಂ.9739319768.

ಪಿ.ಎಸ್.ರಮೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ, ಸೋಮವಾರಪೇಟೆ. ದೂ.ಸಂಖ್ಯೆ: 08276-284422, ಮೊ.ಸಂ: 9448523387.

ಎಸ್.ಲಕ್ಷ್ಮಿಕಾಂತ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಪ್ರಭಾರ) ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ದೂ.ಸಂ: 08274-261053, ಮೊ.ಸಂ: 9900631584 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಗ್ರಾ.ಕು.ನೀ. ಮತ್ತು ನೈರ್ಮಲ್ಯ ಉಪ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರು ಕೋರಿದ್ದಾರೆ.

See also  ಜಲಾಶಯ ಭರ್ತಿಯಾಗಿರುವುದರಿಂದ ರೈತರಿಗೆ ನೆಮ್ಮದಿ: ಸಿಎಂ ಯಡಿಯೂರಪ್ಪ 
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು