News Kannada
Tuesday, November 29 2022

ಕರ್ನಾಟಕ

ರಾಯಚೂರು ವಿದ್ಯಾರ್ಥಿನಿ ಹತ್ಯೆ ಪ್ರಕರಣ: ಕಠಿಣ ಕ್ರಮಕ್ಕೆ ವಿಶ್ವಕರ್ಮ ಸಮಾಜ ಒತ್ತಾಯ - 1 min read

Photo Credit :

ರಾಯಚೂರು ವಿದ್ಯಾರ್ಥಿನಿ ಹತ್ಯೆ ಪ್ರಕರಣ: ಕಠಿಣ ಕ್ರಮಕ್ಕೆ ವಿಶ್ವಕರ್ಮ ಸಮಾಜ ಒತ್ತಾಯ

ಮಡಿಕೇರಿ: ಇತ್ತೀಚೆಗೆ ರಾಯಚೂರಿನಲ್ಲಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿರುವ ಮಡಿಕೇರಿ ತಾಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಹಾಗೂ ಮಹಿಳಾ ಸಂಘ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮೋಹನ್ ಕುಮಾರ್ ಬಿ.ಸಿ. ಹಾಗೂ ಸಂಘಟನಾ ಕಾರ್ಯದರ್ಶಿ ಆರ್.ಬಿ.ರವಿ, ತಪ್ಪಿತಸ್ಥರು ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಕಾನೂನು ರೀತಿಯಲ್ಲಿ ಕಠಿಣ ಶಿಕ್ಷೆಯನ್ನು ವಿಧಿಸಬೇಕೆಂದು ಒತ್ತಾಯಿಸಿದರು. ದೇಶದ ಮುಂದಿನ ಭವಿಷ್ಯವಾಗಿದ್ದ ಅಮಾಯಕ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಹತ್ಯೆ ಮಾಡಿರುವ ಘಟನೆ ಇಡೀ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಮಾನವೀಯತೆಯನ್ನು ಮರೆತು ಅಮಾನವೀಯ ರೀತಿಯಲ್ಲಿ ನಡೆದುಕೊಂಡವರನ್ನು ಮತ್ತು ಪ್ರಕರಣದಲ್ಲಿ ಶಾಮೀಲಾಗಿರುವ ಪ್ರತಿಯೊಬ್ಬರನ್ನು ಬಂಧಿಸಿ ಶಿಕ್ಷಗೆ ಗುರಿ ಮಾಡಬೇಕು. ಶೈಕ್ಷಣಿಕವಾಗಿ ಪ್ರಗತಿ ಸಾಧಿಸುವ ಗುರಿ ಹೊಂದಿರುವ ವಿದ್ಯಾರ್ಥಿನಿಯರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆದರೆ ಇಂದು ಕಾಲೇಜಿಗೆ ತೆರಳುವ ವಿದ್ಯಾರ್ಥಿನಿಯರಿಗೆ ಅಭದ್ರತೆ ಕಾಡುತ್ತಿದ್ದು, ಶಿಕ್ಷಣ ಸಂಸ್ಥೆಗಳು ಕೂಡ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

ರಾಯಚೂರು ವಿದ್ಯಾರ್ಥಿನಿಯ ದಾರುಣ ಅಂತ್ಯಕ್ಕೆ ಕಾರಣಕರ್ತರಾದವರು ಕ್ಷಮೆಗೆ ಅರ್ಹರಲ್ಲ. ಇವರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದೆ ಈ  ರೀತಿಯ ಅನಾಹುತಗಳು ಸಂಭವಿಸದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷ ಕಾನೂನನ್ನು ಜಾರಿ ಮಾಡಬೇಕು. ರಾಯಚೂರು ವಿದ್ಯಾರ್ಥಿನಿ ಮಧು ಪತ್ತಾರ್ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಬೇಕು ಮತ್ತು ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.  

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಬಿ.ಸಿ.ಅಶೋಕ್, ಪ್ರಧಾನ ಕಾರ್ಯದರ್ಶಿ ಇ.ಬಿ.ಪ್ರವೀಣ್, ಮಹಿಳಾ ಅಧ್ಯಕ್ಷೆ ವಿದ್ಯಾವೆಂಕಟರಮಣ, ಮಾಜಿ ಅಧ್ಯಕ್ಷೆ ಸಂಧ್ಯಾ ಅಶೋಕ್ ಉಪಸ್ಥಿತರಿದ್ದರು.

See also  ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು