News Kannada
Friday, December 09 2022

ಕರ್ನಾಟಕ

ರಾಜ್ಯದಲ್ಲಿ ಬರಗಾಲವಿದ್ದರೂ ಸಿಎಂ ರೆಸಾರ್ಟ್ ನಲ್ಲಿ ವಿಶ್ರಾಂತಿ: ಆರ್. ಅಶೋಕ್

Photo Credit :

ರಾಜ್ಯದಲ್ಲಿ ಬರಗಾಲವಿದ್ದರೂ ಸಿಎಂ ರೆಸಾರ್ಟ್ ನಲ್ಲಿ ವಿಶ್ರಾಂತಿ: ಆರ್. ಅಶೋಕ್

ಚಿಂಚೋಳಿ: ರಾಜ್ಯದಲ್ಲಿ ಬರಗಾಲ ಎದುರಾಗಿದ್ದರೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರೆಸಾರ್ಟ್ ಗೆ ಹೋಗಿ ಆರಾಮ ಮಾಡುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇದೆ. ಆದರೆ ಅದನ್ನು ನಿರ್ವಹಣೆ ಮಾಡಬೇಕಾದ ಮುಖ್ಯಮಂತ್ರಿಗಳು ರೆಸಾರ್ಟ್ ನಲ್ಲಿದ್ದಾರೆ ಮತ್ತು ಸಚಿವರು ಚಿಂಚೋಳಿಗೆ ಬಂದು ಕುಳಿತಿದ್ದಾರೆ ಎಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಡಾ. ಅವಿನಾಶ್ ಜಾಧವ್ ಪರವಾಗಿ ಪ್ರಚಾರದಲ್ಲಿ ತೊಡಗಿದ ಅವರು ತಿಳಿಸಿದರು.

ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಮುಖ್ಯಮಂತ್ರಿಗಳು ರೆಸಾರ್ಟ್ ನಲ್ಲೇ ವಿಶ್ರಾಂತಿ ಮಾಡುತ್ತಿದ್ದಾರೆ. ಹಳ್ಳಿಯಿಂದ ಆಡಳಿತ ನಡೆಸುತ್ತೇನೆ ಎಂದಿದ್ದ ಕುಮಾರಸ್ವಾಮಿ ಅವರು ರೆಸಾರ್ಟ್ ನಲ್ಲಿ ವಾಸವಾಗಿದ್ದರೆ ಎಂದು ಅಶೋಕ್ ಹೇಳಿದರು.

See also  ಧಾರ್ಮಿಕ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆಯಾಗಿ ಸಾಮಾಜಿಕ ಅಂತರಕ್ಕೆ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು