News Kannada
Friday, December 02 2022

ಕರ್ನಾಟಕ

ಅನಧಿಕೃತ ವಾಹನಗಳಲ್ಲಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳ ಸಾಗಾಟ ಸಂಪೂರ್ಣ ನಿರ್ಬಂಧ

Photo Credit :

ಅನಧಿಕೃತ ವಾಹನಗಳಲ್ಲಿ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳ ಸಾಗಾಟ ಸಂಪೂರ್ಣ ನಿರ್ಬಂಧ

ಶಿವಮೊಗ್ಗ: ಅಮಾನೀಯವಾಗಿ ಸರಕು ಸಾಗಾಣಿಕೆ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಸಾಗಾಟ ಮಾಡುವುದು ಹಾಗೂ ಶಾಲಾ ಮಕ್ಕಳನ್ನು ನಿಯಮಬಾಹಿರವಾಗಿ ವಾಹನಗಳಲ್ಲಿ ತುಂಬಿಸಿಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಿ ರಾಜ್ಯ ಹೈಕೋರ್ಟ್ ಆದೇಶ ಹೊರಡಿಸಿದ್ದು, ಇದನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಆನುಷ್ಟಾನಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಅಧಿಕಾರಿಗಳಿಗೆ ಆದೇಶ ನೀಡಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಹಾಗೂ ಶಾಲಾ ಆಡಳಿತ ಮಂಡಳಿ, ಖಾಸಗಿ ಸಾರಿಗೆ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ಈ ಕುರಿತು ಸೂಚನೆ ನೀಡಿದರು.

ಕೈಗಾರಿಕಾ ಪ್ರದೇಶಗಳಲ್ಲಿ, ನಿರ್ಮಾಣ ಕಾಮಗಾರಿಗಳಲ್ಲಿ ತೊಡಗಿರುವ ಕೂಲಿ ಕಾರ್ಮಿಕರನ್ನು, ಕೃಷಿ ಚಟುವಟಿಕೆಗಳಿಗಾಗಿ ಕಾರ್ಮಿಕರನ್ನು ಸರಕು ಸಾಗಾಣಿಕಾ ವಾಹನಗಳಲ್ಲಿ ತುಂಬಿಸಿ ಸಾಗಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಇದೇ ರೀತಿ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಅನಧಿಕೃತ ವಾಹನಗಳಲ್ಲಿ ಕರೆದುಕೊಂಡು ಹೋಗುವುದನ್ನು ಸಹ ನಿರ್ಬಂಧಿಸಲಾಗಿದೆ. ಇನ್ನು ಮುಂದೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆದಿರುವ ವಾಹನಗಳಲ್ಲಿ ಮಾತ್ರ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಬಹುದಾಗಿದೆ. ಖಾಸಗಿ ವಾಹನಗಳಲ್ಲಿ ಸೀಟು ಸಾಮರ್ಥ್ಯಕ್ಕೆ ಅನುಗುಣವಾಗಿ ಮಾತ್ರ ವಿದ್ಯಾರ್ಥಿಗಳನ್ನು ಕರೆದು ಹೋಗಲು ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಹಿನ್ನೆಲೆಯಲ್ಲಿ ಮಾಚೇನಹಳ್ಳಿಯಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಪ್ರತಿ ನಿತ್ಯ 70ರಿಂದ 80 ಅನಧಿಕೃತ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ಇನ್ನು ಮುಂದೆ ಯಾವುದೇ ಕೈಗಾರಿಕಾ ಪ್ರದೇಶಗಳಲ್ಲಿ ಇಂತಹ ಸಾಗಾಟಕ್ಕೆ ಅವಕಾಶ ಮಾಡದೆ ಕಾನೂನು ಕ್ರಮಕೈಗೊಳ್ಳಬೇಕು. ಸದರಿ ಕಾರ್ಮಿಕರ ಪ್ರಯಾಣಕ್ಕಾಗಿ ಕೈಗಾರಿಕಾ ಸಂಸ್ಥೆಗಳು ಕೆಎಸ್ಆರ್ಟಿಸಿ ಬಸ್ ಗಳನ್ನು ರಿಯಾಯಿತಿ ದರದಲ್ಲಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಶಾಲಾ ಕಾಲೇಜುಗಳು ಆರಂಭವಾಗುವ ಸಂದರ್ಭದಲ್ಲಿ ಪ್ರತಿ ಶಾಲೆಗಳಿಗೆ ವಿದ್ಯಾರ್ಥಿಗಳು ಯಾವ ವಾಹನಗಳಲ್ಲಿ ಆಗಮಿಸುತ್ತಿದ್ದಾರೆ ಎಂಬುವುದರ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಬೇಕು. ಓಮ್ನಿ, ಅಟೋಗಳು ಸೇರಿದಂತೆ ನಿಯಮಬಾಹಿರವಾಗಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುವ ವಾಹನಗಳ ಛಾಯಾಚಿತ್ರಗಳನ್ನು ತೆಗೆದು ಪ್ರಕರಣಗಳನ್ನು ದಾಖಲಿಸಬೇಕು. ಶಾಲೆಗಳಿಗೆ ದೂರದಿಂದ ಬರುವ ಮಕ್ಕಳಿಗೆ ಕಡ್ಡಾಯವಾಗಿ ವಾಹನ ಸೌಲಭ್ಯವನ್ನು ಶಾಲಾ ಆಡಳಿತ ಮಂಡಳಿಯವರು ಒದಗಿಸಬೇಕು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ರಿಯಾಯಿತಿ ದರದಲ್ಲಿ ಬಸ್ ಪಾಸ್ ವಿತರಿಸಲಾಗುತ್ತಿದ್ದು, ಈ ಸೌಲಭ್ಯ ಪಡೆದುಕೊಳ್ಳಬೇಕು. ಶಾಲಾ ಮಕ್ಕಳ ಅನುಕೂಲಕ್ಕಾಗಿಯೇ ವಿಶೇಷ ರಿಯಾಯಿತಿ ದರದಲ್ಲಿ ಶಾಲೆಗಳಿಗೆ ಒಪ್ಪಂದದ ಮೇರೆಗೆ ಸಂಸ್ಥೆ ಬಸ್ ಗಳನ್ನು ಒದಗಿಸುತ್ತಿದ್ದು, ಆರ್ಥಿಕವಾಗಿ ಸ್ವಂತ ವಾಹನ ಹೊಂದಲು ಸಾಧ್ಯವಿಲ್ಲದೇ ಇರುವ ಶಾಲೆಗಳು ಈ ಸೌಲಭ್ಯ ಪಡೆಯಬಹುದಾಗಿದೆ. ಯಾವುದೇ ಕಾರಣಕ್ಕೂ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದ ವಾಹನಗಳಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಬರಲು ಅವಕಾಶ ನೀಡಬಾರದು. ಇಂತಹ ವಾಹನಗಳು ಅವಘಡಗಳು ಸಂಭವಿಸಿದ ಸಂದರ್ಭಗಳಲ್ಲಿ ಶಾಲಾ ಆಡಳಿತ ಮಂಡಳಿಯನ್ನು ನೇರವಾಗಿ ಹೊಣೆಯಾಗಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

See also  ಬಂಡೀಪುರ ಅರಣ್ಯದಿಂದ ಹೊರಬಂದಿರುವ ಹುಲಿಗೆ ಹುಡುಕಾಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು