News Kannada
Friday, December 09 2022

ಕರ್ನಾಟಕ

ಗಂಗಾವಳಿ ನದಿಗೆ ಅಳವಡಿಸಿರುವ ಕೃಷಿ ಪಂಪ್‌ಸೆಟ್‌ಗಳನ್ನು ಸ್ಥಗಿತಗೊಳಿಸಲು ಡಿಸಿ ಆದೇಶ

Photo Credit :

ಗಂಗಾವಳಿ ನದಿಗೆ ಅಳವಡಿಸಿರುವ ಕೃಷಿ ಪಂಪ್‌ಸೆಟ್‌ಗಳನ್ನು ಸ್ಥಗಿತಗೊಳಿಸಲು ಡಿಸಿ ಆದೇಶ

ಕಾರವಾರ: ಗಂಗಾವಳಿ ನದಿ ಪಾತ್ರದಲ್ಲಿ ನೀರಿನ ಹರಿವು ಪ್ರಮಾಣ ಕಡಿಮೆಯಾಗಿರುವುದರಿಂದ ಕುಡಿಯುವ ನೀರು ಸರಬರಾಜಾಗುವ ಗಂಗಾವಳಿ ನದಿಗೆ ಅಳವಡಿಸಿರುವ ಕೃಷಿ ಪಂಪ್‌ಸೆಟ್‌ಗಳನ್ನು ಸ್ಥಗಿತಗೊಳಿಸಲು ಕ್ರಮ ವಹಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ, ಕಾರವಾರ ಮತ್ತು ಅಂಕೋಲಾ ಸ್ಥಳೀಯ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಡಾ. ಹರೀಶ್‌ಕುಮಾರ್ ಆದೇಶ ನೀಡಿದ್ದಾರೆ.

ಕಾರವಾರ ಮತ್ತು ಅಂಕೋಲ ಭಾಗದಲ್ಲಿ ಕುಡಿಯುವ ನೀರಿನ ಸರಬರಾಜಿಗೆ ಪ್ರಮುಖ ನೀರಿನ ಮೂಲವಾಗಿರುವ ಗಂಗಾವಳಿ ನದಿ ಪಾತ್ರದಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ಪರಿಣಾಮ ಕುಡಿಯುವ ನೀರಿನ ಸರಬರಾಜು ಮಾಡುವ ವಿಷಯದಲ್ಲಿ ವ್ಯತ್ಯಾಸಗಳಾಗುತ್ತಿರುವುದರಿಂದ ಈ ಭಾಗದಲ್ಲಿ ಗಂಗಾವಳಿ ನದಿಗೆ ಅಳವಡಿಸಿರುವ ಕೃಷಿ ಪಂಪ್‌ಗಳನ್ನು ಸ್ಥಗಿತಗೊಳಿಸಬೇಕಾಗಿದೆ. ಹೆಸ್ಕಾಂ ಅಧಿಕಾರಿಗಳು, ಕಾರವಾರ ನಗರಸಭೆ ಹಾಗೂ ಅಂಕೋಲಾ ಪುರಸಭೆ ಅಧಿಕಾರಿಗಳು ಪಂಪ್‌ಸೆಟ್‌ಗಳನ್ನು ಸ್ಥಗಿತಗೊಳಿಸಲು ಕ್ರಮ ವಹಿಸಬೇಕು.

ಮೇ ತಿಂಗಳಲ್ಲಿ ಘಟ್ಟದ ಮೇಲ್ಭಾಗದಲ್ಲಿ ಮಳೆಯಾಗಿದ್ದರೆ ಗಂಗಾವಳಿ ನದಿಗೆ ನೀರುನ ಹರಿವು ಸಮರ್ಪಕವಾಗುತ್ತಿತ್ತು. ಆದರೆ ಮಳೆಯಾಗದ ಕಾರಣ ಹಾಗೂ ತೀವ್ರ ಬೇಸಿಗೆ ಕಾರಣ ನೀರಿನ ಹರಿವು ಕಡಿಮೆಯಾಗಿದೆ. ಅಲ್ಲದೆ ಅಂತರ್ಜಲ ಕುಸಿದಿರುವ ಕಾರಣ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಸಾಧ್ಯತೆ ಇರುವುದರಿಂದ ಪ್ರಸ್ತುತ ಗಂಗಾವಳಿ ನದಿಗೆ ಅಳವಡಿಸಿರುವ ಕೃಷಿ ಪಂಪ್‌ಸೆಟ್‌ಗಳನ್ನು ಸ್ಥಗಿತಗೊಳಿಸುವುದು ಅಗತ್ಯವಿದೆ. ಅಲ್ಲದೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕಿರುವುದರಿಂದ ಈ ಕ್ರಮ ಅನಿವಾರ್ಯವಾಗಿದೆ. ಕಾರವಾರ ಉಪವಿಭಾಗದ ಸಹಾಯಕ ಆಯುಕ್ತರು ಈ ಬಗ್ಗೆ ಮೇಲ್ವಿಚಾರಣೆ ವಹಿಸಿ ಕ್ರಮದ ಬಗ್ಗೆ ವರದಿ ನೀಡುವಂತೆ ಅವರು ಸೂಚನೆ ನೀಡಿದ್ದಾರೆ.

See also  ಗಾಂಧಿ ಜಯಂತಿ ಆಚರಣೆ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮಾರಾಮಾರಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು