News Kannada
Friday, December 02 2022

ಕರ್ನಾಟಕ

ಅನಾಹುತಗಳನ್ನು ತಡೆಯಲು ಸಹಭಾಗಿತ್ವ ಅಗತ್ಯ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್

Photo Credit :

ಅನಾಹುತಗಳನ್ನು ತಡೆಯಲು ಸಹಭಾಗಿತ್ವ ಅಗತ್ಯ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್

ಮಡಿಕೇರಿ: ಸ್ಥಳೀಯ ಮಟ್ಟದಲ್ಲಿ ಸಮುದಾಯ ಸಹಭಾಗಿತ್ವದೊಂದಿಗೆ ವಿಪತ್ತು ಎದುರಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಸೂಕ್ಷ್ಮ ಪ್ರದೇಶಗಳ 32 ಗ್ರಾ.ಪಂ.ಗಳಿಗೆ ನಿಯೋಜಿಸಿರುವ ನೋಡೆಲ್ ಅಧಿಕಾರಿಗಳು, ಪಿಡಿಒಗಳು ಹಾಗೂ ಕಂದಾಯ ನಿರೀಕ್ಷಕರ ಉಪ ಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮ ಮಟ್ಟದಲ್ಲಿ ವಿಪತ್ತು ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಮುದಾಯ ಸಹಭಾಗಿತ್ವ ಅತ್ಯಗತ್ಯ. ಆ ದಿಸೆಯಲ್ಲಿ ಈಗಾಗಲೇ ರಚಿಸಿರುವ ಸಮಿತಿಯೊಂದಿಗೆ ಚರ್ಚಿಸಿ ಮಾಹಿತಿ ಕ್ರೋಡೀಕರಿಸಿ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸುವಂತಾಗಬೇಕು ಎಂದರು.

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ಥರನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವುದು, ಪ್ರಥಮ ಚಿಕಿತ್ಸೆ ಕೊಡುವುದು, ಮನಃಸ್ಥೈರ್ಯ ತುಂಬುವುದು, ನೈರ್ಮಲ್ಯಕ್ಕೆ ಒತ್ತು ನೀಡುವುದು ಮತ್ತಿತರ ಬಗ್ಗೆ ಗಮನಹರಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಮಾತನಾಡಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಮುದಾಯ ಸಹಭಾಗಿತ್ವ ಜೊತೆಗೆ ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ, ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
ಕಳೆದ ವರ್ಷದ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಮಡಿಕೇರಿ ನಗರ ಚಾಮುಂಡೇಶ್ವರಿ ನಗರ, ಇಂದಿರಾನಗರ, ಗ್ರಾಮಗಳಾದ ಕಾಲೂರು ಮತ್ತು ತಂತಿಪಾಲಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು ಸಮಸ್ಯೆಗಳ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದರು.

ಸ್ಥಳೀಯರಿಂದ ಮಾಹಿತಿ ಪಡೆದು ಸೂಕ್ತ ಕ್ರಮದ ಭರವಸೆ ನೀಡಿದರು. ತಹಶೀಲ್ದಾರ್ ನಟೇಶ್, ಪಿಡಿಒ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

See also  ಬನ್ನೂರಿನಲ್ಲಿ ಮಹಿಳೆಯ ಹತ್ಯೆಗೈದಿದ್ದ ಇಬ್ಬರು ಹಂತಕರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು