News Kannada
Wednesday, December 07 2022

ಕರ್ನಾಟಕ

ಕಾರು ಮರಕ್ಕೆ ಡಿಕ್ಕಿ: ಐವರಿಗೆ ಗಂಭೀರ ಗಾಯ

Photo Credit :

ಕಾರು ಮರಕ್ಕೆ ಡಿಕ್ಕಿ: ಐವರಿಗೆ ಗಂಭೀರ ಗಾಯ

ಕೆ.ಆರ್.ಪೇಟೆ: ರಸ್ತೆಯಲ್ಲಿ ಹೋಗುತ್ತಿದ್ದ ಜಾನುವಾರುಗಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಘಟನೆ ತಾಲೂಕಿನ ಪುರಗೇಟ್ ಬಳಿಯಿರುವ ಚನ್ನರಾಯಪಟ್ಟಣ-ಕೆ.ಆರ್.ಪೇಟೆ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಘಟನೆಯಲ್ಲಿ ಮಳವಳ್ಳಿ ತಾಲೂಕಿನ ವಡ್ಡರಹಳ್ಳಿ ಗ್ರಾಮದ ವಡ್ಡರಹಳ್ಳಿ ಗ್ರಾಮದ ತಮ್ಮಯ್ಯ(55), ರಾಜಮ್ಮ(50), ನಂದನ್‍ಕುಮಾರ್(14), ಶಿಲ್ಪ(30, ರೂಪಾ(32) ಗಾಯಗೊಂಡಿದ್ದಾರೆ.

ಶಿವಮೊಗ್ಗದಿಂದ ಮಳವಳ್ಳಿ ಕಡೆಗೆ ತಮ್ಮ ಕಾರಿನಲ್ಲಿ ತಮ್ಮಯ್ಯ ಕುಟುಂಬದವರು ಹೋಗುತ್ತಿದ್ದರು. ತಮ್ಮಯ್ಯ ಮತ್ತು ಕುಟುಂಬದವರಿದ್ದ ಕಾರು ಪುರಗೇಟ್ ಬಳಿ ತೆರಳುವ ವೇಳೆ ರಸ್ತೆಯಲ್ಲಿ ಹೋಗುತ್ತಿದ್ದ ಜಾನುವಾರುಗಳು ಅಡ್ಡಾದಿಡ್ಡಿಯಾಗಿ ಓಡಿದ ಕಾರಣ ಕಾರು ಚಾಲಕ ತಮ್ಮಯ್ಯ ಅವರ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಮಗುಚಿ ಬಿದ್ದು ತೆಂಗಿನ ಮರಕ್ಕೆ ಡಿಕ್ಕಿ ಹೊಡೆದಿದೆ.

ಪರಿಣಾಮ ಕಾರಿನಲ್ಲಿದ್ದ ತಮ್ಮಯ್ಯ, ರಾಜಮ್ಮ, ನಂದನ್‍ಕುಮಾರ್, ಶಿಲ್ಪ, ರೂಪಾ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಕೂಡಲೇ ಸಾರ್ವಜನಿಕರು 108 ತುರ್ತು ವಾಹನಕ್ಕೆ ಕರೆ ಮಾಡಿ ಗಾಯಾಳುಗಳನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಅದೃಷ್ಟವಶಾತ್ ಎರಡು ವರ್ಷದ ಮಗುವಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ.

ಘಟನೆ ಕುರಿತು ಕಾರಿನ ಚಾಲಕ ತಮ್ಮಯ್ಯ ಅವರು ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಆನಂದೇಗೌಡ ಅವರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

 

See also  ಭೂಹಕ್ಕು ಪತ್ರ ನೀಡುವಂತೆ ಡಿಸಿ ಡಾ.ಸಜಿತ್  ಬಾಬು  ಆದೇಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು