News Kannada
Friday, December 09 2022

ಕರ್ನಾಟಕ

ಲೋಕಸಭೆ ಚುನಾವಣೆಯ ಮತ ಎಣಿಕೆ : ಜಿಲ್ಲೆಯಲ್ಲಿ ನಿಷೇಧಾಜ್ಞೆ ಆದೇಶ

Photo Credit :

ಲೋಕಸಭೆ ಚುನಾವಣೆಯ ಮತ ಎಣಿಕೆ : ಜಿಲ್ಲೆಯಲ್ಲಿ ನಿಷೇಧಾಜ್ಞೆ ಆದೇಶ

ಕಾರವಾರ: ಲೋಕಸಭಾ ಚುನಾವಣೆಯ ಮತ ಎಣಿಕೆಯ ಪ್ರಯುಕ್ತ ಮೇ ೨೨ರ ರಾತ್ರಿ ೧೨ ರಿಂದ ಮೇ ೨೪ ರ ರಾತ್ರಿ ೧೨ರವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ ಕಲಂ ೧೪೪ರ ಅನ್ವಯ ನಿಷೇಧಾಜ್ಞೆ ಆದೇಶವನ್ನು ಜಿಲ್ಲಾ ಚುನಾವಣಾಧಿಕಾರಿ ಡಾ. ಹರಿಶ್ಕುಮಾರ್ ಕೆ. ಹೊರಡಿಸಿದ್ದಾರೆ.

ಉತ್ತರ ಕನ್ನಡ ಲೋಕಸಭಾ ಚುನಾವಣೆ ಮತ ಎಣಿಕೆ ಮೇ ೨೩ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಡಾ ಎ. ವಿ. ಬಾಳಿಗಾ ಕಾಲೇಜಿನಲ್ಲಿ ನಡೆಯಲಿದೆ. ಮತ ಎಣಿಕೆ ಕಾರ್ಯದ ನಂತರ ವಿಜಯಿಯಾದ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುತ್ತಾ ಮೆರವಣಿಗೆಯಲ್ಲಿ ಸಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳು ಕೋಮು ಸೂಕ್ಷ್ಮಪ್ರದೇಶಗಳಾಗಿರುವುದರಿಂದ ಸಮಾಜ ಘಾತುಕ ಶಕ್ತಿಗಳು ಶಾಂತಿ ಭಂಗವನ್ನು ಮಾಡುವ ಸಾಧ್ಯತೆಗಳಿವೆ.

ವಿಜೇತ ಅಭ್ಯರ್ಥಿಗಳು ಹಾಗೂ ಪರಾಜಿತ ಅಭ್ಯರ್ಥಿಗಳ ಬೆಂಬಲಿಗರ ನಡುವೆ ಘರ್ಷಣೆಗಳಾಗುವ ಸಾಧ್ಯತೆಗಳು ಇದ್ದು, ಸಾರ್ವಜನಿಕ ಆಸ್ತಿ ಪಾಸ್ತಿಗೆ ಧಕ್ಕೆ ಉಂಟಾಗುವ ಹಾಗೂ ಶಾಂತಿ ಭಂಗವಾಗುವ ಸಂಭವಗಳಿರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ೧೪೪ ನಿಷೇದಾಜ್ಞೆ ಹೊರಡಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಸ್ತಾವನೆ ಸಲ್ಲಿಸಿದ್ದರು. 

ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಮತ ಎಣಿಕೆ ಕಾರ್ಯವ ಸುಸೂತ್ರವಾಗಿ ನಡೆಯಲು ಹಾಗೂ ಮತ ಎಣಿತ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಂಡು ಶಾಂಪಾಡುವ ಸಲುವಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ ೧೯೭೩ ರ ಕಲಂ ೧೪೪ ರನ್ವಯ ನಿಷೇಧಾಜ್ಞೆ ಜಾರಿಗೊಳಿಸುವುಯ ಅತಿ ಅವಶ್ಯವೆಂದು ಮನಗಂಡು ಆದೇಶವನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆ.

ಈ ನಿಷೇಧಾಜ್ಞೆಯ ಅವಧಿಯಲ್ಲಿ ಸಾರ್ವಜನಿಕರು ಐದು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಮತ ಎಣಿಕೆ ಕೇಂದ್ರದ ಆವರಣವನ್ನು ಹೊರತುಪಡಿಸಿ ಸಾರ್ವಜನಿಕ ರಸ್ತೆ, ಬೀದಿ, ಓಣಿ, ಕೇರಿಗಳಲ್ಲಿ ಸಾರ್ವಜನಿಕಸ್ಥಳ, ಸಾರ್ವಜನಿಕ ಕಟ್ಟಡ ಮತ್ತು ಸರ್ಕಾರಿ ಕಚೇರಿಯ ಸುತ್ತಮುತ್ತ ಗುಂಪು ಸೇರುವುದು ಹಾಗೂ ಗುಂಪು ಸೇರುವಂತಿಲ್ಲ. ಯಾವುದೇ ಆಯುಧ, ಕುಡಗೋಲು, ಖಡ್ಗ , ಬರ್ಟಿ ಕಲ್ಲು , ಚೂರಿ , ಡೊಣ್ಣೆ ಲಾರಿ, ಅಥವಾ ದೈಹಿಕ ದುಡನೆ ಕಾರಣವಾಗುವ ಇನ್ನಾವುದೇ ವಸ್ತುಗಳನ್ನು ಹೊಂದುವುದು ಅಥವಾ ಹಿಡಿದು ಓಡಾಡುವಂತಿಲ್ಲ.

ಯಾವುದೇ ರೀತಿಯ ವಿಜಯೋತ್ಸವ, ಕರಾಳೋತ್ಸವ ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ ಸಾರ್ವಜನಿಕ ರಾಜಕೀಯ ಸಭೆ ನಡೆಸುವಂತಿಲ್ಲ. ನಡೆಸುವುದಾದಂತೆ ಸಂಬಂಧಪಟ್ಟ ವ್ಯಾಪ್ತಿಯ ಪೊಲೀಸ್ ಠಾಣೆಯ ಪರವಾನಿಗಿ ಪಡೆಯಬೇಕು.

ಈ ಸಂದರ್ಭದಲ್ಲಿ ಪಟಾಕಿಗಳನ್ನು ಸಿಡಿಸಿರುವುದು, ಸ್ಫೋಟಕ ವಸ್ತುಗಳನ್ನು ಹೊಂದಿವುದನ್ನು ನಿಷೇಧಿಸಿದೆ. ಸಾರ್ವಜನಿಕವಾಗಿ ಚೇಷ್ಟೆ ಮಾಡುವುದು, ಚಿತ್ರಗಳ ಮೂಲಕ ಪ್ರದರ್ಶನ ಮಾಡುವುದು ಭಿತ್ತಿ ಪತ್ರಗಳನ್ನು ಅಂಟಿರುವುದು, ಅಸಭ್ಯತನ, ಅನಾಚಾರ ಸಾರ್ವಜನಿಕ ಭದ್ರತೆ ಕ್ಷೀತಿಲಗೊಳ್ಳವುದು ಯಾವುದೇ ರೀತಿಯ ಅಪರಾಧ ಮಾಡಲು ಪ್ರೇರೇಪಿಸುವುದು ಕಾನೂನಾತ್ಮಕ ಕ್ರಮಕ್ಕೆಅರ್ಹವಾಗಿದೆ.

See also  ಚಾಮರಾಜನಗರದಲ್ಲಿ ಬೆಡ್‌ ಸಿಗದೇ ಸೋಂಕಿತ ಸಾವು

ಮೇ ೨೩ರಂದು ಮತ ಎಣಿಕೆ ಕಾರ್ಯ ಸಮಯದಲ್ಲಿ ಜಿಲ್ಲೆಯಾದ್ಯಂತ ತಾಲೂಕು ಕೇಂದ್ರದಲ್ಲಿ ಬೆಂಬಲಿಗರನ್ನು ಸೇರಿಸುವುದು ನಿಷೇಧವಿದೆ.

ಮೇ ೨೨ ರಾತ್ರಿ ೧೨ರಿಂದ ಮೇ ೨೪ರ ಮಧ್ಯರಾತ್ರಿ ೧೨ರವರೆಗೆನಿಷೇಧಾಜ್ಞೆ ಜಾರಿಯಲ್ಲಿದ್ದು ಸರಕಾರ ನಡೆಸುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ. ಹರೀಶಕುಮಾರ್ ಕೆ. ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು