News Kannada
Tuesday, November 29 2022

ಕರ್ನಾಟಕ

ಸಮುದ್ರದಲ್ಲಿ ಮುಳುಗುತ್ತಿದ್ದ ವಿದ್ಯಾರ್ಥಿಗಳ‌ ರಕ್ಷಣೆ - 1 min read

Photo Credit :

ಸಮುದ್ರದಲ್ಲಿ ಮುಳುಗುತ್ತಿದ್ದ ವಿದ್ಯಾರ್ಥಿಗಳ‌ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ತಕ್ಷಣ ಧಾವಿಸಿ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ‌ ಸಂಭವಿಸಿದೆ.

ಬಿಬಿಡಿ ಕಾಲೇಜಿನ‌ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೋವಾದಿಂದ ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಆಗಮಿಸಿದ್ದರು. ಸಮುದ್ರದಲ್ಲಿ ಈಜಾಡುತ್ತಿದ್ದಾಗ ಅಲೆಯ‌ ರಭಸಕ್ಕೆ ರಾಜೀವ್ ಮುಖರ್ಜಿ(18), ರತೀಕ್ ರಾಜ್(19), ಅಂಕುಶ್ ಸಿಂಗ್(19) ಎಂಬ ಮೂವರು ವಿದ್ಯಾರ್ಥಿಗಳು ಸಿಲುಕಿದ್ದರು.

ಅಲ್ಲೇ ಕರ್ತವ್ಯದಲ್ಲಿದ್ದ ಕಡಲತೀರದ ಲೈಫ್ ಗಾರ್ಡ್ ಸಿಬ್ಬಂದಿ ಸಮುದ್ರದಲ್ಲಿ ಮುಳುಗುತ್ತಿದ್ದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

See also  ಅಡುಗೆಯಲ್ಲಿ ಎಣ್ಣೆ ಜಾಸ್ತಿ ಹಾಕಿದ್ದಕ್ಕೆ ಹೆಂಡತಿ ಮುಖಕ್ಕೆ ಕುದಿಯುವ ಎಣ್ಣೆ ಎರಚಿದ ಗಂಡ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು