News Kannada
Monday, December 05 2022

ಕರ್ನಾಟಕ

ಜೂ.11 ರಿಂದ ಕೊಡಗಿನಲ್ಲಿ ಸ್ವಚ್ಛ ಮೇವ ಜಯತೆ ಆಂದೋಲನ ಆರಂಭ

Photo Credit :

ಜೂ.11 ರಿಂದ ಕೊಡಗಿನಲ್ಲಿ ಸ್ವಚ್ಛ ಮೇವ ಜಯತೆ ಆಂದೋಲನ ಆರಂಭ

ಮಡಿಕೇರಿ: ವೈಯಕ್ತಿಕ ಗೃಹ ಶೌಚಾಲಯ, ಸಮುದಾಯ ಶೌಚಾಲಯಗಳ ಬಳಕೆ, ಶಾಲೆ ಮತ್ತು ಅಂಗನವಾಡಿ ಶೌಚಾಲಯಗಳ ಸದ್ಬಳಕೆಗಾಗಿ ವಿದ್ಯಾರ್ಥಿಗಳಲ್ಲಿ ಮತ್ತು ಶಿಕ್ಷಕರಲ್ಲಿ ಜಾಗೃತಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆ ಮತ್ತು ಜಲ ಸಂರಕ್ಷಣೆ ಕುರಿತು ಜಿಲ್ಲೆಯಲ್ಲಿ ಜಾಗೃತಿ ಮೂಡಿಸಲು ಜೂ.11 ರಂದು ವಿದ್ಯುಕ್ತವಾಗಿ ಚಾಲನೆ ನೀಡುವ ಮೂಲಕ ಪ್ರತಿಯೊಂದು ಗ್ರಾಮದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಸ್ವಚ್ಛಮೇವ ಜಯತೆ ಆಂದೋಲನ ನಡೆಯಲಿದೆ.

ಈ ಕಾರ್ಯಕ್ರಮವು ಜಿಲ್ಲೆಯಾದ್ಯಂತ ಜೂನ್ 11 ರಿಂದ ಜುಲೈ 9ರವರೆಗೆ ನಿರಂತರವಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳು ಗ್ರಾಮ ಮಟ್ಟದಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವಂತೆ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಕೋರಿದ್ದಾರೆ.

ಜೂನ್ 11ರಿಂದ ಜುಲೈ 10ವರೆಗೆ ಆಂದೋಲನವು ಗ್ರಾಮ ಪಂಚಾಯತ್‍ಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವ ದೃಷ್ಠಿಯಿಂದ ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರವು ಸ್ವಚ್ಚ ಮೇವ ಜಯತೆ ಕಾರ್ಯಕ್ರಮವನ್ನು ರಾಜ್ಯಾದಂತ ಜಾರಿಗೊಳಿಸಿದ್ದು, ಇದನ್ನು ಜಿಲ್ಲೆಯ ಜನಪ್ರತಿನಿಧಿಗಳ ಸಂಘ ಸಂಸ್ಥೆ ಹಾಗೂ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಗೊಳಿಸಲು ಸಹಕರಿಸುವಂತೆ ಕೋರಿದ್ದಾರೆ.

ಇತ್ತೀಚೆಗೆ ಗ್ರಾಮಗಳಲ್ಲಿ ಪ್ಲಾಸ್ಟಿಕ್ ಮತ್ತಿತರ ಕಸದ ಕೇಂದ್ರಗಳಾಗುತ್ತಿದೆ. ಇದನ್ನು ನಿಯಂತ್ರಿಸುವ ಮೂಲಕ ಸ್ವಚ್ಛತೆಗೆ ಆದ್ಯತೆ ನೀಡುವುದು ಸ್ವಚ್ಛ ಮೇವ ಜಯತೆ ಕಾರ್ಯಕ್ರಮದ ಉದ್ದೇಶವಾಗಿದೆ.

See also  ಕಲಬುರ್ಗಿ ಜಿಲ್ಲಾಧಿಕಾರಿಯಾಗಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅಧಿಕಾರ ಸ್ವೀಕಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು