ಬೆಂಗಳೂರು: ಮಣ್ಣು ಕುಸಿದ ಪರಿಣಾಮ ಜಾರ್ಖಂಡ್ ನ ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲ್ಲೂಕಿನ ದೆಸೂರ ಹಳ್ಳಿಯಲ್ಲಿ ಸೋಮವಾರ ನಡೆದಿದೆ. ಮೃತರನ್ನು ಸರ್ಜುನ್ ಸಿಂಗ್(21) ದುರ್ಗೇಶ್ ಕುಮಾರ್(22 ) ಸೇರಿದಂತೆ ಮತ್ತೋರ್ವ ಸಾವನ್ನಪ್ಪಿದ್ದಾನೆ.
ಇವರು ಬೆಳಗಾವಿ-ಖಾನಾಪುರು ರಸ್ತೆ ಕಾಮಗಾರಿಯಲ್ಲಿ ತೊಡಗಿದ್ದ ವೇಳೆ ಮಣ್ಣು ಕುಸಿದು ಈ ಅವಘಡ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಮೃತದೇಹವನ್ನು ಮೇಲೆತ್ತುವ ಕಾರ್ಯಚರಣೆ ನಡೆಯುತ್ತಿದೆ. ಮೃತರ ಕುಟುಂಬವನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.ಮ