News Kannada
Tuesday, November 29 2022

ಕರ್ನಾಟಕ

ವಾರದಲ್ಲಿ ಮೂರು ದಿನ ಸುಮಲತಾ ಮಂಡ್ಯದಲ್ಲೇ ವಾಸ್ತವ್ಯ - 1 min read

Photo Credit :

ವಾರದಲ್ಲಿ ಮೂರು ದಿನ ಸುಮಲತಾ ಮಂಡ್ಯದಲ್ಲೇ ವಾಸ್ತವ್ಯ

ಮಂಡ್ಯ: ಫಲಿತಾಂಶದ ಬಳಿಕ ಮಂಡ್ಯದಲ್ಲಿ ಕಾಣಿಸಿಕೊಂಡ ಸಂಸದೆ ಸುಮಲತಾ ಇನ್ನು ಮುಂದೆ ವಾರಕ್ಕೆ ಮೂರು ದಿನ ಮಂಡ್ಯದಲ್ಲೇ ವಾಸ್ತವ್ಯ ಹೂಡುವುದಾಗಿ ಹೇಳಿದ್ದಾರೆ.

ಕೀಲಾರ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಸ್ವಚ್ಚ ಮೇವ ಜಯತೇ ಜನಾಂದೋಲನಕ್ಕೆ ಚಾಲನೆ ನೀಡಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈಗ ರಾಜಕಾರಣ ಮಾಡುವ ಸಮಯವಲ್ಲ. ಟೀಕೆಗಳಿಗೆ ಉತ್ತರ ಕೊಡುತ್ತಾ ಸಮಯ ಹರಣ ಮಾಡುವುದಿಲ್ಲ. ನನಗೆ ಜನರು ಜವಾಬ್ದಾರಿ ಕೊಟ್ಟಿದ್ದಾರೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ಬರ ಮತ್ತು ನೀರಿನ ಸಮಸ್ಯೆ ಜಿಲ್ಲೆಯಲ್ಲಿ ತೀವ್ರವಾಗಿದೆ. ಅದನ್ನು ಬಗೆಹರಿಸುವತ್ತ ಗಮನ ಹರಿಸೋಣ ಎಂದು ಸೂಚ್ಯವಾಗಿ ಹೇಳಿದರಲ್ಲದೆ, ಚುನಾವಣಾ ಸಂದರ್ಭದಲ್ಲಿ ನಾನು ಯಾರ ಬಗ್ಗೆಯೂ ಹಗುರವಾಗಿ ಮಾತನಾಡಿಲ್ಲ. ಈಗಲೂ ಸಹ ನಾನು ಮಾತನಾಡುವುದಿಲ್ಲ. ರಾಜಕಾರಣ ಮಾಡುತ್ತಾ ಕುಳಿತರೆ ಜನರು ನಮ್ಮನ್ನು ಆಯ್ಕೆ ಮಾಡಿರುವುದಕ್ಕೆ ನ್ಯಾಯ ಒದಗಿಸಿದಂತಾಗುವುದಿಲ್ಲ ಎಂದರು.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಗ್ರಾಮ ವಾಸ್ತವ್ಯದ ಕುರಿತು ಕೇಳಿದ ಪ್ರಶ್ನೆಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ನಾಡಿನ ಮುಖ್ಯಮಂತ್ರಿಯಾಗಿ ಅವರು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಅವರ ಕೆಲಸ ಅವರು ಮಾಡಲಿ ಎಂದರು.

ನಾನು ಬಿಜೆಪಿ ಅಥವಾ ಕಾಂಗ್ರೆಸ್ ಸೇರುವ ವಿಚಾರವಾಗಿ ಗಾಸಿಫ್ ಹಬ್ಬಿವೆ. ಇದಕ್ಕೆಲ್ಲಾ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು, ನಾನಾಗಿಯೇ ಇರಲು ಬಯಸುತ್ತೇನೆ. ಮಂಡ್ಯ ಜನರ ಪರವಾಗಿ ಸದಾ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.

ಇನ್ನು ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಯೋಜನೆಯಡಿ ತಾಲೂಕಿನ ಕೀಲಾರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛಮೇವ ಜಯತೆ ಆಂದೋಲನ ಕಾರ್ಯಕ್ರಮದಲ್ಲಿ ದಳಪತಿಗಳು ಭಾಗವಹಿಸದೆ ಇದ್ದದ್ದು ರಾಜಕೀಯ ದ್ವೇಷ ಇನ್ನೂ ಇದೆ ಎಂಬುದನ್ನು ತೋರಿಸಿದೆ.

ಚುನಾವಣೆ ಸಮಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಅಂಗೀಕಾರ ಸಂಬಂಧ ವಿವಾದಕ್ಕೆ ಗುರಿಯಾಗಿ ವರ್ಗಾವಣೆಗೊಂಡಿದ್ದ ಜಿಲ್ಲಾಧಿಕಾರಿ ಎನ್. ಮಂಜುಶ್ರೀ ಅವರು ಸಮಾರಂಭಕ್ಕೆ ಬಾರದೆ ದೂರ ಉಳಿದಿದ್ದು ಅಚ್ಚರಿಗೆ ಕಾರಣವಾಗಿದೆ.

See also  ಲಯನ್ಸ್ ಸಂಸ್ಥೆಯ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು