News Kannada
Monday, November 28 2022

ಕರ್ನಾಟಕ

ಹವಾಮಾನ ಆಧಾರಿತ ಬೆಳೆ ವಿಮೆ: ಸದುಪಯೋಗಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಸಲಹೆ - 1 min read

Photo Credit :

ಹವಾಮಾನ ಆಧಾರಿತ ಬೆಳೆ ವಿಮೆ: ಸದುಪಯೋಗಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಸಲಹೆ

ಮಡಿಕೇರಿ: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯು ರೈತರಿಗೆ ಹೆಚ್ಚಿನ ಅನುಕೂಲವಾಗುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮರು ವಿನ್ಯಾಸಗೊಳಿಸಿದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅನಿಸ್ ಕಣ್ಮಣಿ ಜಾಯ್ ಅವರು, ಅತಿವೃಷ್ಠಿ ಹಾಗೂ ಅನಾವೃಷ್ಠಿ ಆದ ಸಂದರ್ಭದಲ್ಲಿ ಹವಮಾನ ಆಧಾರಿತ ಬೆಳೆ ವಿಮೆಯ ಅನುಕೂಲಗಳನ್ನು ರೈತರಿಗೆ ತಿಳಿಸಿ ಹೆಚ್ಚಿನ ಅನುಕೂಲವಾಗುವಂತೆ ಕಾರ್ಯ ಪ್ರವೃತ್ತರಾಗುವಂತೆ ತೋಟಗಾರಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ ಅವರು ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಕುರಿತ ಮಾಹಿತಿ ನೀಡಿ, ಈ ಯೋಜನೆಯು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆಯು ಮಳೆ ಬಿದ್ದ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನೀಡಲಾಗುವುದು. ಮಳೆ ಪ್ರಮಾಣ ಆಧಾರಿಸಿ ಮತ್ತು ವ್ಶೆಜ್ಞಾನಿಕ ಆಧಾರದ ಮೇಲೆ ಬೆಳೆ ವಿಮೆ ಪರಿಹಾರ ಮೊತ್ತವನ್ನು ರೈತರಿಗೆ ನೀಡಲಾಗುವುದು. 2016-17ರಲ್ಲಿ ಈ ಯೋಜನೆಯಡಿ ವಿಮೆ ಪರಿಹಾರ ವಿತರಿಸಿದ ಮಾಹಿತಿಯನ್ನು ಸಭೆಗೆ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ತೋಟಗಾರಿಕ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಮೋದ್, ಲೀಡ್ ಬ್ಯಾಂಕ್ ಮುಖ್ಯ ಪ್ರಬಂಧಕರಾದ ಗುಪ್ತಾಜೀ, ಭಾರತೀಯ ತೋಟಗಾರಿಕೆ ಸಂಶೋಧನ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ವಿಮಾ ಸಂಸ್ಥೆಯ ಪ್ರತಿನಿಧಿಗಳು ಇತರರು ಹಾಜರಿದ್ದರು.

ಹೆಚ್ಚಿನ ಮಾಹಿತಿ:-2019-20ನೇ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ ಮೂರು ತಾಲ್ಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಯಾದ ಕಾಳುಮೆಣಸಿಗೆ ಹಾಗೂ ಅಡಿಕೆಗೆ ಅನುಷ್ಠಾನಗೊಳಿಸಲಾಗುತ್ತಿದೆ.

ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಆದ್ರತೆ ಮತ್ತಿತರ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುವುದು.

2019ರ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು, ವಿಮಾ ಮೊತ್ತ ಹಾಗೂ ವಿಮಾ ಕಂತಿನ ವಿವರ ಇಂತಿದೆ.

ಕಾಳು ಮೆಣಸು:-ಪ್ರತಿ ಹೆಕ್ಟೇರ್‍ ಗೆ ವಿಮಾ ಮೊತ್ತ 47 ಸಾವಿರ, ವಾಣಿಜ್ಯ ವಿಮಾ ಕಂತಿನ ದರ ಶೇ 24.50, ಪ್ರತಿ ಹೆಕ್ಟರ್‍ ಗೆ ಕಂತು 11,515, ರೈತರು ಪಾವತಿಸಬೇಕಾದ ಪ್ರಮಾಣದ (ಶೇ 5), 2350 ರೂಗಳು.
ಅಡಿಕೆ:- ಪ್ರತಿ ಹೆಕ್ಟೇರ್‍ ಗೆ ವಿಮಾ ಮೊತ್ತ 1,28,000, ವಾಣಿಜ್ಯ ವಿಮಾ ಕಂತಿನ ದರ ಶೇ.22, ಪ್ರತಿ ಹೆಕ್ಟರ್‍ ಗೆ ಕಂತು 28,160ರೂ, ರೈತರು ಪಾವತಿಸಬೇಕಾದ ಪ್ರಮಾಣ (ಶೇ 5) 6400 ರೂಗಳು.
ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಮಡಿಕೇರಿ ದೂರವಾಣಿ ಸಂಖ್ಯೆ 08272-220555, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಸೋಮವಾರಪೇಟೆ ದೂರವಾಣಿ ಸಂಖ್ಯೆ 08276-281364, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಪೋನ್ನಂಪೇಟೆ ದೂರವಾಣಿ ಸಂಖ್ಯೆ 08274-249637 ಹಾಗೂ ರೈತ ಸಂಪರ್ಕ ಕೆಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್‍ಗಳ ಅಧಿಕಾರಿಗಳನ್ನು ಸಂಪರ್ಕಿಸಬೇಕಾಗಿ ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಈ ಯೋಜನೆಯ ವಿಮೆ ನೋಂದಣಿಗೆ ಜೂನ್, 30 ಕೊನೆ ದಿನವಾಗಿದೆ.

See also  ರೈಲಿನಿಂದ ಹೊರಗೆಸೆಯಲ್ಪಟ್ಟು ವ್ಯಕ್ತಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು