ತುಮಕೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾ ಕಾರು ಪಲ್ಟಿಯಾಗಿ ಆರು ಮಂದಿ ಮೃತಪಟ್ಟಿರುವ ಘಟನೆಯು ಕುಣಿಗಲ್ ನ ಸಿದ್ದಾಪುರ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶುಕ್ರವಾರ ನಡೆದಿದೆ.
ಬೆಂಗಳೂರಿಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಅತಿ ವೇಗವಾಗಿ ಸಾಗುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಮಹಿಳೆ ಮತ್ತು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮೃತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.