ಕಾರವಾರ: ಉಸಿರಾಟದ ಸಮಸ್ಯೆಯಿಂದ ಅನಾರೋಗ್ಯಕ್ಕೆ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಗೌಡ ಅವರನ್ನು ಭೇಟಿಯಾದ ಸಂಸದ ಅನಂತಕುಮಾರ್ ಹೆಗಡೆ ಅವರು ಆರೋಗ್ಯದ ಸ್ಥಿತಿ ವಿಚಾರಿಸಿದರು.
ಶನಿವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಅನಂತಕುಮಾರ ಹೆಗಡೆ, ಸುಕ್ರಿ ಗೌಡರ ಆರೋಗ್ಯದ ಬಗ್ಗೆ ವೈದ್ಯರಿಂದಲೂ ಮಾಹಿತಿ ಪಡೆದರು. ಹಣ್ಣು- ಹಂಪಲು ನೀಡಿ, ಅಜ್ಜಿಯನ್ನು ಸರಿಯಾಗಿ ಆರೈಕೆ ಮಾಡುವಂತೆ ವೈದ್ಯರಿಗೆ ಸೂಚಿಸಿದರು.
ಈ ವೇಳೆ ಶಾಸಕಿ ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಣಪತಿ ಉಳ್ವೇಕರ್, ಮಾಧ್ಯಮ ಸಂಚಾಲಕ ನಾಗರಾಜ ನಾಯಕ ಇದ್ದರು.