News Kannada
Sunday, September 25 2022

ಕರ್ನಾಟಕ

ದಮನಿತ ಮಹಿಳೆಯರಿಗೆ ಸ್ವಉದ್ಯೋಗ: ತರಬೇತಿ ನೀಡಲು ಜಿಲ್ಲಾಧಿಕಾರಿ ಸೂಚನೆ - 1 min read

Photo Credit :

ದಮನಿತ ಮಹಿಳೆಯರಿಗೆ ಸ್ವಉದ್ಯೋಗ: ತರಬೇತಿ ನೀಡಲು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ: ದಮನಿತ ಮಹಿಳೆಯರಿಗೆ ಸ್ವಉದ್ಯೋಗ ಕೈಗೊಳ್ಳಲು ಟೈಲರಿಂಗ್ ಸೇರಿದಂತೆ ಅಗತ್ಯ ಕೌಶಲ್ಯ ತರಬೇತಿ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಮನಿತ ಮಹಿಳೆಯರ ಅಭಿವೃದ್ಧಿಗಾಗಿ ರಚಿಸಲಾದ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ಟ್ರಾನ್ಸ್ ಜೆಂಡರ್ಸ್‍ರವರ ಜೀವನ ಮಟ್ಟವನ್ನು ಸುಧಾರಿಸಲು ಜಿಲ್ಲಾ ಮಟ್ಟದ ಕೋಶ ರಚನೆ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅವರ ಹಾಗೂ ಅವಲಂಭಿತ ಕುಟುಂಬಗಳಿಗೆ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮಹಿಳಾ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅರುಂಧತಿ ಅವರು ಜಿಲ್ಲೆಯಲ್ಲಿ ಚೇತನಾ ಯೋಜನೆಯಡಿ 35 ಮಹಿಳೆಯರಿಗೆ ಆರ್ಥಿಕ ಸೌಲಭ್ಯ ಒದಗಿಸಲಾಗಿದೆ. ಜಿಲ್ಲೆಯಲ್ಲಿನ ಟ್ರಾನ್ಸ್ ಜೆಂಡರ್ ವ್ಯಕ್ತಿತ್ವದವರ ಜೀವನ ಮಟ್ಟವನ್ನು ಸುಧಾರಿಸಲು 50 ಸಾವಿರ ರೂ.ಸಾಲ ನೀಡಲಾಗುತ್ತದೆ. ಇದರಲ್ಲಿ 25 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.

ದಮನಿತ ಮಹಿಳೆಯರ ಜೀವನ ಮಟ್ಟ ಸುಧಾರಿಸುವಲ್ಲಿ ಸ್ವಯಂ ಉದ್ಯೋಗವನ್ನು ನೀಡಬೇಕು ಮತ್ತು ಸರ್ಕಾರದ ಅಗತ್ಯ ಸೌಲಭ್ಯಗಳನ್ನು ಪೂರೈಸುವ ಮೂಲಕ ಇಲಾಖೆಗಳು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂದರು.

ದಮನಿತ ಮಹಿಳೆಯರ ಜೀವನ ಮಟ್ಟವನ್ನು ಉತ್ತಮವಾಗಿ ಸುಧಾರಿಸಲು ಅವರ ಆಶಕ್ತಿಯ ಸ್ವಯಂ ಉದ್ಯೋಗವನ್ನು ನೀಡಬೇಕು. ಬ್ಯೂಟಿಷಿಯನ್ ಮತ್ತು ಹೊಲಿಗೆ ತರಬೇತಿಯನ್ನು ಹೆಚ್ಚಾಗಿ ನೀಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ರಾಧಾ, ಡಿವೈಎಸ್‍ಪಿ ಸುಂದರ್ ರಾಜ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಜಗನ್ನಾಥ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳಾದ ಡಾ.ಎ.ಸಿ.ಶಿವಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಆನಂದ್, ವೈದ್ಯಕೀಯ ಶಿಕ್ಷಣ ಸಂಸ್ಥೆಯ ವೈದ್ಯಾಧಿಕಾರಿ ಡಾ.ಮಂಜುನಾಥ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ ದರ್ಶನ್, ಸಬ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ, ಸಿಡಿಪಿಒ ಕಚೇರಿಯ ವ್ಯವಸ್ಥಾಪಕರಾದ ಸವಿತಾ, ವಕೀಲರಾದ ಮೀನಾಕುಮಾರಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ, ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳಾದ ಜಾಯ್ಸ್ ಮೇಜೆಜಸ್ ಇತರರು ಪಾಲ್ಗೊಂಡಿದ್ದರು.

See also  ಮಡಿಕೇರಿಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು