News Kannada
Friday, October 07 2022

ಕರ್ನಾಟಕ

ಕರಾವಳಿಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ಸಚಿವ ರೇವಣ್ಣ - 1 min read

Photo Credit :

ಕರಾವಳಿಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದ ಸಚಿವ ರೇವಣ್ಣ

ಬೆಳ್ತಂಗಡಿ: ಅತಂತ್ರ ಸ್ಥಿತಿಯಲ್ಲಿರುವ ರಾಜ್ಯ ಸರಕಾರವನ್ನು ಉಳಿಸಲು ಸಚಿವ ರೇವಣ್ಣ ಅವರು ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ಮೊರೆ ಹೋಗುತ್ತಿದ್ದು ಭಾನುವಾರ ಧರ್ಮಸ್ಥಳ ಕ್ಷೇತ್ರಕ್ಕೂ ಭೇಟಿ ನೀಡಿದರು.

ಮೊದಲಿಗೆ ಅವರು ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಕೊಂಚ ಕಾಲ ವಿಶ್ರಾಂತಿ ಪಡೆದ ಬಳಿಕ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಪತ್ರಕರ್ತರು ಸರ್ಕಾರದ ಆಡಳಿತದ ಬಗ್ಗೆ ಪ್ರಸ್ತಾಪಿಸಿದಾಗ ದೇವರು ಕೊಟ್ಟದನ್ನು ದೇವರೇ ಉಳಿಸಿ ಕೊಡುತ್ತಾರೆ. ಎಲ್ಲವೂ ದೇವರಿಗೆ ಬಿಟ್ಟದ್ದು ಎಂದಷ್ಟೇ ಹೇಳಿದರು.

ಬಳಿಕ ಬಯಲು ಆಲಯವೆಂದು ಪ್ರಸಿದ್ಧವಾಗಿರುವ ಸೌತಡ್ಕದಲ್ಲಿ ಶ್ರೀ ಗಣಪತಿ ದೇವರ ದರ್ಶನ ಮಾಡಿ ಬೆಂಗಳೂರಿಗೆ ಪ್ರಯಾಣಸಿದರು.

 

 

See also  ಕೆ.ಆರ್.ಪೇಟೆಯಲ್ಲಿ ಕೊರೋನಾಗೆ ವೈದ್ಯ ಬಲಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು