News Kannada
Sunday, September 25 2022

ಕರ್ನಾಟಕ

ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಸಾವು - 1 min read

Photo Credit :

ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಸಾವು

ಮಂಡ್ಯ: ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಬೈಕ್‍ಗೆ ಸ್ಪರ್ಶಿಸಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ಪಿ.ಬಿ ಮಂಚನಹಳ್ಳಿ ಹೊರವಲಯದಲ್ಲಿರುವ ಹೇಮಾವತಿ ವಿತರಣಾ ನಾಲಾ ಏರಿಯ ಮೇಲೆ ನಡೆದಿದೆ.

ಅಂಚೆಮುದ್ದನಹಳ್ಳಿ ಗ್ರಾಮದ ನಿಂಗೇಗೌಡರ ಪುತ್ರ ದರ್ಶನ್ (38) ಎಂಬಾತನೇ ವಿದ್ಯುತ್ ತಗುಲಿ ಮೃತಪಟ್ಟ ದುರ್ದೈವಿ. ಈತ ಕೆಲಸದ ನಿಮಿತ್ತ ಶೀಳನೆರೆ ನಾಡಕಚೇರಿಗೆ ತೆರಳಿ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಬೈಕ್‍ನಲ್ಲಿ ಬರುವಾಗ ಪಿ.ಬಿ. ಮಂಚನಹಳ್ಳಿ ಹೊರವಲಯದಲ್ಲಿರುವ ನಾಲೆ ಏರಿ ಮೇಲೆ ರಸ್ತೆಗೆ ಅಡ್ಡಲಾಗಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು ಬೈಕ್‍ಗೆ ಅದು ತಾಗಿದ ಪರಿಣಾಮ ವಿದ್ಯುತ್ ಸ್ಪರ್ಶಗೊಂಡು ದರ್ಶನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ವಿಷಯ ತಿಳಿದ ಪಟ್ಟಣ ಪೊಲೀಸ್ ಠಾಣೆಯ ಎಸ್‍ಐ ವೆಂಕಟೇಶ್ ನೇತೃತ್ವದ ಸಿಬ್ಬಂದಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೆಸ್ಕ್ ನ ಇಇ ನಾಗರಾಜು ಮತ್ತು ಎಇಇ ರಾಜಶೇಖರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪೊಲೀಸರು ಮೃತ ದೇಹವನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ನೀಡಿದ್ದಾರೆ. ಈ ಸಂಬಂಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಸಮುದ್ರ ಮಧ್ಯೆ ಕೆಟ್ಟು ನಿಂತ ಬೋಟ್: ಕೋಸ್ಟ್ ಗಾರ್ಡ್ ಸಿಬ್ಬಂದಿಗಳಿಂದ ರಕ್ಷಣೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು