ಕಾರವಾರ: ಗೋವಾದಿಂದ ಅಕ್ರಮವಾಗಿ ಕೊಂಕಣ ರೈಲ್ವೆಯಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ಮೂವರು ಮಹಿಳೆಯರನ್ನು ಮದ್ಯದೊಂದಿಗೆ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹಾರವಾಡ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಅಂಕೋಲಾದವರೇ ಆದ ಮಾಲಾ ಹರಿಕಂತ್ರ, ಮಂಗಲಾ ಮಾಂಜ್ರೇಕರ್, ಜ್ಯೋತಿ ಹರಿಕಂತ್ರ ಬಂಧಿತ ಮಹಿಳೆಯರು. ಅಕ್ರಮವಾಗಿ ಗೋವಾದಿಂದ 35 ಲೀಟರ್ ಮದ್ಯ ಸಾಗಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿ ತಪಾಸಣೆ ನಡೆಸಿದರು.
ಬಳಿಕ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ಬಳಿಕ ಅಂಕೋಲಾದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.