News Kannada
Sunday, September 25 2022

ಕರ್ನಾಟಕ

ಶಾಸಕ ಹೆಬ್ಬಾರ್ ನಾಪತ್ತೆ ಹುಡುಕಿಕೊಡುಂತೆ ಡಿವೈಎಸ್ಪಿಗೆ ಜಿಲ್ಲಾ ಕಾಂಗ್ರೆಸ್ ದೂರು - 1 min read

Photo Credit :

ಶಾಸಕ ಹೆಬ್ಬಾರ್ ನಾಪತ್ತೆ ಹುಡುಕಿಕೊಡುಂತೆ ಡಿವೈಎಸ್ಪಿಗೆ ಜಿಲ್ಲಾ ಕಾಂಗ್ರೆಸ್ ದೂರು

ಕಾರವಾರ: ನಮ್ಮ ಕ್ಷೇತ್ರದ ಶಾಸಕರು ನಾಪತ್ತೆಯಾಗಿದ್ದಾರೆ. ಅವರನ್ನು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಹುಡುಕಿ ಕೊಡಿ ಎಂದು ಕಾಂಗ್ರೆಸ್ ಪ್ರಮುಖರು, ಕಾರ್ಯಕರ್ತರು ಶಿರಸಿ ಉಪವಿಭಾಗದ ಉಪ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಮುಂಡಗೋಡ ಶಾಸಕ ಶಿವರಾಮ್ ಹೆಬ್ಬಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅತೃಪ್ತರೊಂದಿಗೆ ವಾಸ್ತವ್ಯ ಹೂಡಿದ್ದಾರೆ ಎನ್ನುವ ಮಾಹಿತಿ ಇದೆ.

ಕಾಂಗ್ರೆಸ್ ಪ್ರಮುಖರು ಡಿವೈಎಸ್ಪಿ ಕಚೇರಿಗೆ ತೆರಳಿದ ಜಿಲ್ಲಾ ಕಾಂಗ್ರೆಸ್ ಭೀಮಣ್ಣ ನಾಯ್ಕ ಮತ್ತಿತ್ತರರು ಯಲ್ಲಾಪುರ ಶಾಸಮ ಶಿವರಾಮ ಹೆಬ್ಬಾರ್ ಹುಡುಕಿಕೊಡುವಂತೆ ಡಿವೈಎಸ್ಪಿ ಜಿ. ಟಿ. ನಾಯಕ ಅವರಿಗೆ ದೂರು ಸಲ್ಲಿಸಿದ್ದಾರೆ. ಕಳೆದ 10 ದಿನಗಳಿಂದ ಶಾಸಕರು ನಾಪತ್ತೆಯಾಗಿದ್ದಾರೆ.

ಶಾಸಕರು ಸಂಪರ್ಕಕ್ಕೂ ಲಭ್ಯವಿಲ್ಲ. ಅಲ್ಲದೇ ಕ್ಷೇತ್ರದ ಜನತೆ ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಶಾಸಕರನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಜನರು ಅಪಹರಣ ಮಾಡಿ ಅವರನ್ನು ಅಕ್ರಮವಾಗಿ ಹಾಗೂ ಬಲವಂತವಾಗಿ ಕೂಡಿ ಹಾಕಿರಬಹುದೆಂಬ ಸಂಶಯ ಬಲವಾಗಿದೆ ಎಂದು ತಿಳಿಸಿದ್ದಾರೆ.

ಶಾಸಕರ ಕ್ಷೇತ್ರಕ್ಕೆ ಅತೀ ಅಗತ್ಯವಿರುವ ಕಾರಣ ದೂರನ್ನು ಸ್ವೀಕರಿಸಿದ ತಕ್ಷಣವೇ ಕಾರ್ಯಪ್ರವೃತ್ತರಾಗಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರರನ್ನು ಹುಡುಕಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ಭೀಮಣ್ಣ ನಾಯ್ಕ, ರೈತರು, ಸಾರ್ವಜನಿಕರು ಸೇರಿದಂತೆ ಅನೇಕರು ಶಾಸಕರ ಕುರಿತಾಗಿ ಕೇಳಿಕೊಂಡು ಬರುತ್ತಿದ್ದಾರೆ. ಕಳೆದ ನಾಲ್ಕು ದಿನಗಳ ಮೊದಲು ಶಾಸಕರ ಮನೆಗೆ ತೆರಳಿದಾಗ ಅವರು ಇಲ್ಲದ ಕಾರಣ ಅವರನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದೇವೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಭಾಗ್ವತ್, ಜಿಲ್ಲಾ ಪಂಚಾಯತ ಸದಸ್ಯ ಜಿ.ಎನ್.ಹೆಗಡೆ ಮುರೇಗಾರ, ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾಧ್ಯಕ್ಷ ದೀಪಕ ದೊಡ್ಡುರು, ನ್ಯಾಯವಾದಿ ಎಂ. ಎನ್. ನಾಯ್ಕ, ಶಿರಸಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಮೇಶ ದುಭಾಶಿ ಸೇರಿದಂತೆ ಇನ್ನಿತರರು ಜೊತೆಯಲ್ಲಿದ್ದರು.

See also  ಕೊಡಗಿನಲ್ಲಿ ಅಕ್ರಮ ಹೋಂಸ್ಟೇಗಿಲ್ಲವೆ ಕಡಿವಾಣ?
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

178
Srinivas Badkar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು