News Kannada
Thursday, October 06 2022

ಕರ್ನಾಟಕ

ಶಂಕಿತ ನಕ್ಸಲ್ ರೂಪೇಶ್ ಮಡಿಕೇರಿ ಕೋರ್ಟ್‍ಗೆ ಹಾಜರು: ಆ.9ಕ್ಕೆ ವಿಚಾರಣೆ ಮುಂದೂಡಿಕೆ - 1 min read

Photo Credit :

ಶಂಕಿತ ನಕ್ಸಲ್ ರೂಪೇಶ್ ಮಡಿಕೇರಿ ಕೋರ್ಟ್‍ಗೆ ಹಾಜರು: ಆ.9ಕ್ಕೆ ವಿಚಾರಣೆ ಮುಂದೂಡಿಕೆ

ಮಡಿಕೇರಿ: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಬಿಗಿ ಭದ್ರತೆಯಲ್ಲಿ ಇದೀಗ 8ನೇ ಬಾರಿಗೆ ಮಡಿಕೇರಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಕೇರಳ ರಾಜ್ಯದ ವೈವೂರು ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ರೂಪೇಶ್‍ನನ್ನು ಸೋಮವಾರ ಸಂಜೆ ವೇಳೆಯಲ್ಲಿ ಮಡಿಕೇರಿಗೆ ಕರೆತಂದು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು. ಇಂದು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಆಗಮಿಸಿದ ರೂಪೇಶ್, ಪೊಲೀಸ್ ವಾಹನದಿಂದ ಕೆಳಗಿಳಿಯುತ್ತಿದ್ದಂತೆಯೇ ನಕ್ಸಲ್ ಬಾರಿ ಜಿಂದಾಬಾದ್ ಎಂದು ಘೋಷಣೆ ಕೂಗಿ ನ್ಯಾಯಾಲಯ ಆವರಣ ಪ್ರವೇಶಿಸಿದ. ಬಳಿಕ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ವೀರಪ್ಪ.ವಿ.ಮಲ್ಲಾಪುರ ಅವರ ಎದುರು ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಹಾಜರುಪಡಿಸಲಾಯಿತು.

ಪ್ರಕರಣದ ಕುರಿತು ಪರ-ವಿರೋಧ ವಾದವನ್ನು ಆಲಿಸಿದ ನ್ಯಾಯಾಧೀಶರು ಪ್ರಕರಣದ ಮುಂದಿನ ವಿಚಾರಣೆಯನ್ನು ಆ.9ಕ್ಕೆ ಮುಂದೂಡಿದರು.

ರಾಜ್ಯ ಗುಪ್ತ ದಳ, ರಾಜ್ಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಫ್ತಿಯಲ್ಲಿ ನ್ಯಾಯಾಲಯದ ಆವರಣದಲ್ಲಿ ಹಾಜರಿದ್ದರು.

ನಗರ ಠಾಣೆಯ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ನೇತೃತ್ವದಲ್ಲಿ ನ್ಯಾಯಾಲಯದ ಆವರಣದಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಪೊಲೀಸ್ ಸರ್ಪಗಾವಲಿನಲ್ಲಿ ರೂಪೇಶ್‍ನನ್ನು ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

 

See also  ಅಪಘಾತ: ಕಾಸರಗೋಡು ಸಿಪಿಎಂ ಕಾರ್ಯದರ್ಶಿ ಸೇರಿ ನಾಲ್ವರಿಗೆ ಗಾಯ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು